ಅನಧಿಕೃತ ಕೋಚಿಂಗ್ ಸೆಂಟರ್ ಖಂಡಿಸಿ ಪ್ರತಿಭಟನೆನಗರದಲ್ಲಿ ಅನಧಿಕೃತ ತರಬೇತಿ ಕೇಂದ್ರಗಳನ್ನು ಮುಚ್ಚದಿದ್ದರೆ ಆ.5 ರಿಂದ ಕನ್ನಡ ಶಾಲೆಗಳ ಉಳಿವಿಗಾಗಿ ಶಾಲೆಗಳಿಗೆ ರಜೆ ಘೋಷಿಸಿ, ಕ್ಷೇತ್ರ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಿಂದ ತಹಸೀಲ್ದಾರ್ ಕಾರ್ಯಾಲಯದವರೆಗೆ ಪ್ರತಿಭಟನೆ ನಡೆಸಿ, ನಿರಂತರ ಧರಣಿ ಸತ್ಯಾಗ್ರಹ ಕೈಗೊಳ್ಳುವುದಾಗಿ ತಾಲೂಕು ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಆರ್. ಚನ್ನಬಸು ವನದುರ್ಗ ತಿಳಿಸಿದರು.