ಕಲಾವಿದರಿಗೆ ಸೂಕ್ತ ವೇದಿಕೆ ಕಲ್ಪಿಸಿ: ಡಾ. ಸಿದ್ದಪ್ಪ ಹೊಟ್ಟಿಕಲ್ಯಾಣ ಕರ್ನಾಟಕ ಭಾಗದಲ್ಲೂ ಪ್ರತಿಭಾವಂತ ಕಲಾವಿದರಿದ್ದಾರೆ. ಆದರೆ ಅವರನ್ನು ಗುರುತಿಸಿ, ಸೂಕ್ತ ವೇದಿಕೆ ಕಲ್ಪಿಸುವ ಅವಶ್ಯಕತೆ ಇದೆ. ಆ ನಿಟ್ಟಿನಲ್ಲಿ ನೀನಾಸಂ ಕಲಾವಿದ ಶ್ರೀನಿವಾಸ್ ಕಲಾ ಸಂಘ ಕಟ್ಟಿಕೊಂಡು ಪ್ರತಿಭಾವಂತರಿಗೆ ಸದವಕಾಶ ಕಲ್ಪಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಮತ್ತು ಎನ್‌ಎಎಫ್‌ಇಡಿ ರಾಷ್ಟ್ರೀಯ ಉಪಾಧ್ಯಕ್ಷರೂ ಆದ ಡಾ. ಸಿದ್ದಪ್ಪ ಹೊಟ್ಟಿ ಹೇಳಿದರು.