ಸುರಪುರದಲ್ಲಿ ಗರಿಗೆದರುತ್ತಿರುವ ವಿಧಾನಸಭೆ ಉಪಚುನಾವಣೆಶಾಸಕರಾಗಿದ್ದ, ಹಿರಿಯ ಕಾಂಗ್ರೆಸ್ಸಿಗ ರಾಜಾ ವೆಂಕಟಪ್ಪ ನಾಯಕ ಅವರ ಅಕಾಲಿಕ ನಿಧನದಿಂದಾಗಿ ತೆರವಾಗಿರುವ ಸುರಪುರ (ಶೋರಾಪುರ- ಎಸ್ಟಿ ಮೀಸಲು) ವಿಧಾನಸಭೆ ಕ್ಷೇತ್ರದ ಚುನಾವಣೆ ಲೋಕಸಭೆ ಚುನಾವಣೆಯ ಜೊತೆಗೇ, ಅಂದರೆ ಮೇ 7ರಂದು ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ, ಇಲ್ಲಿ ರಾಜಕೀಯ ಪಕ್ಷಗಳಲ್ಲಿ ಚುನಾವಣಾ ಕಾವು ರಂಗೇರುತ್ತಿದೆ.