ಐದು ತಿಂಗಳಾದರೂ ಬಾರದ ವೇತನ: ಶಿಕ್ಷಕರ ಪರದಾಟಶಹಾಪುರ ನಗರದಲ್ಲಿ ಶಿಕ್ಷಕರ ಬಾಕಿ ವೇತನ ಪಾವತಿಸುವಂತೆ ಒತ್ತಾಯಿಸಿ ಶಿಕ್ಷಕರು ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಯಿತು. ಸ್ಥಳಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಂಜುನಾಥ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಶಿಭಾ ಜೇಲಿಯನ್ ಅವರು ಆಗಮಿಸಿ ಶಿಕ್ಷಕರ ಸಮಸ್ಯೆ ಆಲಿಸಿದರು.