ಪ್ರಾಣಿಬಲಿ ತಡೆ ಸಂಪೂರ್ಣ ಯಶಸ್ವಿ: ದಯಾನಂದ ಸ್ವಾಮೀಜಿಸುರಪುರ ತಾಲೂಕಿನ ದೇವಿಕೇರಾ ಗ್ರಾಮದ ಗ್ರಾಮದೇವತೆಗಳ ಜಾತ್ರೆಯಲ್ಲಿ ಪ್ರಾಣಿಬಲಿ ತಡೆ ಸಂಪೂರ್ಣ ಯಶಸ್ವಿಯಾಗಿದ್ದು, ಜಿಲ್ಲಾಡಳಿತ, ಪೊಲೀಸರು, ಮಾಧ್ಯಮಗಳು ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಅಲ್ಲದೆ ಗ್ರಾಮಸ್ಥರ ಸಹಕಾರ ಮಾತಿನಲ್ಲಿ ವರ್ಣಿಸಲು ಸಾಧ್ಯವಿಲ್ಲ ಎಂದು ಬೆಂಗಳೂರಿನ ಬಸವ ಧರ್ಮ ಜ್ಞಾನ ಪೀಠದ ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ, ಪಶು-ಪ್ರಾಣಿ ಬಲಿ ನಿರ್ಮೂಲನ ಜಾಗೃತಿ ಮಾಹಾಸಂಘ ಅಧ್ಯಕ್ಷರಾದ ದಯಾನಂದ ಸ್ವಾಮೀಜಿ ತಿಳಿಸಿದರು.