ಕ್ರೀಡಾ ವಸತಿನಿಲಯ ಅವ್ಯವಸ್ಥೆ: ತನಿಖೆಗೆ ಸಚಿವ ನಾಗೇಂದ್ರ ಸೂಚನೆಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿರುವ ಕ್ರೀಡಾ ವಸತಿ ನಿಲಯದ ಅವ್ಯವಸ್ಥೆ ಹಾಗೂ ಮಕ್ಕಳಿಗಾಗುತ್ತಿರುವ ಶೋಷಣೆ ಬಗ್ಗೆ ಕನ್ನಡಪ್ರಭ ವರದಿ ಉಲ್ಲೇಖಿಸಿ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ನೀಡಿದ ದೂರಿನ ಮೇರೆಗೆ, ತನಿಖೆಗೆ ಆದೇಶಿಸಿರುವ ರಾಜ್ಯ ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಜಿ. ನಾಗೇಂದ್ರ ಅವರು, ಐದು ದಿನಗಳೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಯವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಆಯುಕ್ತರಿಗೆ ಸೂಚಿಸಿದ್ದಾರೆ