ಬರ ಪರಿಹಾರ ಕಾರ್ಯ ಶೀಘ್ರ ಜಾರಿಗೊಳಿಸಲು ಆಗ್ರಹಕೇಂದ್ರ ತಂಡವು ಕರ್ನಾಟಕದ ವಿವಿಧೆಡೆ ಬರಪೀಡಿತ ಪ್ರದೇಶಗಳ ಸಮೀಕ್ಷೆ ಮಾಡಿ ವಾರಗಳು ಕಳೆದರೂ, ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ಹಣ ಬಿಡುಗಡೆ ಮಾಡದೆ ಇರುವುದು ಅತ್ಯಂತ ನೋವಿನ ಸಂಗತಿ ಎಂದು ಖಂಡಿಸಿ, ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (ಎಐಕೆಕೆಎಂಎಸ್) ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.