ಕುಡುಕರ ಅಡ್ಡಯಾದ ಸುರಪುರ ಬಿಸಿಎಂ ಹಾಸ್ಟೆಲ್!ಹಿಂದುಳಿದ ವರ್ಗಗಳ ಇಲಾಖೆಯ ವಿದ್ಯಾರ್ಥಿನಿಲಯ ನಿರ್ಮಾಣಗೊಂಡು 50 ವರ್ಷ ಕಳೆದು ಲಕ್ಷಾಂತರ ವಿದ್ಯಾರ್ಥಿಗಳ ಬದುಕಿಗೆ ತಾಣವಾಗಿತ್ತು. ಕಳೆದ ನಾಲ್ಕೈದು ವರ್ಷಗಳ ಹಿಂದೆ ಕಟ್ಟಡ ದುರಸ್ತಿ ಹೆಸರಲ್ಲಿ ವಿದ್ಯಾರ್ಥಿಗಳನ್ನು ಮತ್ತೊಂದು ಕಟ್ಟಡಕ್ಕೆ ವರ್ಗಾಯಿಸಿದ ಬಳಿಕ ಈಗಿದು ಪಾಳುಬಿದ್ದು ಅನೈತಿಕ ಚಟುವಟಿಕೆಯ ಅಡ್ಡೆಯಾಗಿ ಮಾರ್ಪಾಡಾಗಿದೆ.