ಜಿಲ್ಲೆಯ ಶಹಾಪುರ ತಾಲೂಕಿನ ಕರಕಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಲಿತ ಮಕ್ಕಳು ಬಿಸಿಯೂಟ ಮಾಡಿದ ತಟ್ಟೆ ತೊಳೆಯಲು ನಿರಾಕರಿಸಿದ್ದ ಅಡುಗೆ ಸಹಾಯಕಿಯರನ್ನು ಸೋಮವಾರ ಬದಲಾಯಿಸಲಾಗಿದೆ.
ಜಿಲ್ಲೆಯ ಸುರಪುರ ನಗರದಲ್ಲಿ ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ-150 ಹಾಯ್ದು ಹೋಗಿರುವ ಕಾಯ್ದಿಟ್ಟ ಅರಣ್ಯ ಪ್ರದೇಶದ 16 ಗುಂಟೆ ಭೂಮಿ ಬಗ್ಗೆ ನಕಲಿ ದಾಖಲೆ ಸೃಷ್ಟಿಸಿ ಖರೀದಿ ತೋರಿಸಿದ ಕೆಲವರು, ನಗರಸಭೆ ವ್ಯಾಪ್ತಿ ಖಾಸಗಿ ಆಸ್ತಿಯನ್ನಾಗಿಸಿಕೊಂಡಿದ್ದಾರೆ.
ಸರ್ಕಾರಿ ಶಾಲೆಯ ದಲಿತ ಮಕ್ಕಳು ಬಿಸಿಯೂಟ ಮಾಡಿದ್ದ ತಟ್ಟೆ ತೊಳೆಯಲು ಅಡುಗೆ ಸಹಾಯಕ ಸಿಬ್ಬಂದಿ ನಿರಾಕರಿಸಿದ ಕಾರಣ ಮಧ್ಯಾಹ್ನದ ಬಿಸಿಯೂಟ ಸ್ಥಗಿತಗೊಂಡ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಸಮೀಪದ ಕರಕಳ್ಳಿ ಗ್ರಾಮದಲ್ಲಿ ನಡೆದಿದೆ.