ಕಂಪನಿಗಳಲ್ಲಿ ಅಕ್ರಮ ವಲಸಿಗರ ಬಗ್ಗೆ ಪರಿಶೀಲಿಸಿ: ಎಸ್ಪಿಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿನ ಕೆಮಿಕಲ್ ತ್ಯಾಜ್ಯ ಕಂಪನಿಗಳಲ್ಲಿ ಅನ್ಯ ರಾಜ್ಯಗಳ ಕಾರ್ಮಿಕರ ಮಾಹಿತಿ ಗೌಪ್ಯ ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಶಂಕೆ ವ್ಯಕ್ತವಾಗಿದ್ದು, ಕಾರ್ಖಾನೆಗಳು ಕಾರ್ಮಿಕ ಇಲಾಖೆಗೂ ಮಾಹಿತಿ ಮುಚ್ಚಿಡುತ್ತಿವೆ ಎಂಬ ಜನರ ಮಾತುಗಳು ಕೇಳಿಬರುತ್ತಿದ್ದ ಬೆನ್ನಲ್ಲೇ, ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿನ ಸುಮಾರು 20ಕ್ಕೂ ಹೆಚ್ಚು ಅಪಾಯಕಾರಿ ಕೆಮಿಕಲ್ ಕಂಪನಿಗಳಲ್ಲಿ ಅನ್ಯ ರಾಜ್ಯಗಳ ಕಾರ್ಮಿಕ ಗುತ್ತಿಗೆದಾರರು ಹಾಗೂ ಬಾಂಗ್ಲಾ ವಲಸಿಗರು ಇರುವ ಶಂಕೆ ಕಂಡುಬಂದಿದ್ದು, ಈ ಕುರಿತು ಖುದ್ದಾಗಿ ಭೇಟಿ ನೀಡಿ, ಪ್ರತಿಯೊಬ್ಬ ಕಾರ್ಮಿಕನ ಬಗ್ಗೆ 30 ದಿನಗಳೊಳಗೆ ವರದಿ ನೀಡುವಂತೆ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಸೈದಾಪುರ ಠಾಣೆಯ ಇನ್ಸ್ಪೆಕ್ಟರ್ ಅವರಿಗೆ ಪತ್ರಮುಖೇನ ಸೂಚಿಸಿದ್ದಾರೆ.