ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಸಮೀಪ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ (19) ಚೈನ್ ತುಂಡಾಗಿದ್ದರಿಂದ ಅಪಾರ ಪ್ರಮಾಣದಲ್ಲಿ ಕಳೆದೆರಡು ದಿನಗಳಿಂದ ನೀರು ಪೋಲಾಗುತ್ತಿರುವುದರಿಂದ ರಾಜ್ಯದ ಆಣೆಕಟ್ಟುಗಳಿಗೆ ಇದೊಂದು ನಿರ್ವಹಣೆ ನಿಟ್ಟಿನಲ್ಲಿ ಎಚ್ಚರಿಕೆಯ ಗಂಟೆಯಾಗಿದೆ.