ವಾಂತಿಭೇದಿ : ಬೂದೂರು ಗ್ರಾಮದಲ್ಲಿ 6 ಜನ ಅಸ್ವಸ್ಥತಾಲೂಕಿನ ಕಾಕಲವಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೂದೂರು ಗ್ರಾಮದಲ್ಲಿ ಆರು ಜನ ವಾಂತಿಭೇದಿಯಿಂದ ಅಸ್ವಸ್ಥಗೊಂಡು, ಚಿಕತ್ಸೆ ಪಡೆಯುತ್ತಿದ್ದಾರೆ. ಕಲುಷಿತ ನೀರು ಸೇವನೆ ಇದಕ್ಕೆ ಕಾರಣ ಎನ್ನಲಾಗಿದೆ. ಗ್ರಾಮಕ್ಕೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್ಲೈನ್ ಅಲ್ಲಲ್ಲಿ ಸೋರಿಕೆಯಾಗುತ್ತಿತ್ತು. ಇದರಿಂದ ಕಲುಷಿತ ನೀರು ಮಿಶ್ರಣಗೊಂಡಿದ್ದು, ಅದೇ ನೀರನ್ನು ಕುಡಿಯಲು ಬಳಸಿದ್ದು ಈ ಸಮಸ್ಯೆಗೆ ಕಾರಣವಿರಬಹುದು ಎಂದು ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.