ಮಕ್ಕಳನ್ನು ಶಿಕ್ಷಣದಿಂದ ವಂಚಿತರಾಗಿ ಮಾಡಬೇಡಿ: ಪಲ್ಲವಿನಿಮ್ಮ ಸಮಸ್ಯೆಗಳಿಗೆ ಹಂತ, ಹಂತವಾಗಿ ಪರಿಹಾರ ನೀಡಲಾಗುವವುದು. ಸರ್ಕಾರ ಅನುದಾನ ಸೇರಿದಂತೆಯೇ ವಿವಿಧ ಯೋಜನೆಗಳು ಜಾರಿ ಮಾಡಿದೆ. ಅವುಗಳನ್ನು ಪಡೆದು ಆರ್ಥಿಕವಾಗಿ ಮುಂದೆ ಬನ್ನಿ, ಯಾವುದೇ ಕಾರಣಕ್ಕೂ ನಿಮ್ಮ ಮಕ್ಕಳನ್ನು ಶಿಕ್ಷಣದಿಂದ ವಂಚಿತರಾಗಿ ಮಾಡಬೇಡಿ ಎಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮದ ರಾಜ್ಯಾಧ್ಯಕ್ಷೆ ಜಿ.ಪಲ್ಲವಿ ಹೇಳಿದರು.