ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ನೌಕರರ ಪ್ರತಿಭಟನೆಮುಂಬರುವ ಬಜೆಟ್ ನಲ್ಲಿ ಐಸಿಡಿಎಸ್ಗೆ ಬಜೆಟ್ ಹಂಚಿಕೆಯನ್ನು ಹೆಚ್ಚಿಸಬೇಕು. ಅಂಗನವಾಡಿ ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸಿ ಕನಿಷ್ಠ ವೇತನ, ಸಾಮಾಜಿಕ ಭದ್ರತೆ, ಪಿಂಚಣಿ ನೀಡಬೇಕು ಎಂದು ಒತ್ತಾಯಿಸಿ ಅಂಗನವಾಡಿ ನೌಕರರ ಸಂಘ ತಾಲೂಕು ಸಮಿತಿ ವತಿಯಿಂದ ನಗರದ ತಹಸೀಲ್ದಾರರ ಮುಖಾಂತರ ಭಾರತ ಸರ್ಕಾರದ ಹಣಕಾಸು ಸಚಿವರಿಗೆ ಮನವಿ ಸಲ್ಲಿಸಲಾಯಿತು.