ಯಡ್ತಾಡಿ: ಸಂವಿಧಾನ ಜಾಗೃತಿ ಜಾಥಾ

| Published : Feb 12 2024, 01:31 AM IST

ಸಾರಾಂಶ

ಸಾಯಿಬ್ರಕಟ್ಟೆ ಸರ್ಕಲ್‌ನಿಂದ ಯಡ್ತಾಡಿ ಗ್ರಾಮ ಪಂಚಾಯಿತಿ ವರೆಗೆ ನಡೆದ ಸಂವಿಧಾನ ಜಾಗೃತಿ ಜಾಥಾ, ಸ್ತಬ್ಧ ಚಿತ್ರ ಮೆರವಣಿಗೆ, ಬೈಕ್ ರ‍್ಯಾಲಿ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಕುಂದಾಪುರಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಸಮಾಜ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ವತಿಯಿಂದ ಯಡ್ತಾಡಿ ಗ್ರಾಮ ಪಂಚಾಯಿತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು.ಆರಂಭದಲ್ಲಿ ಇಲ್ಲಿನ ಸಾಯಿಬ್ರಕಟ್ಟೆ ಸರ್ಕಲ್‌ನಿಂದ ಯಡ್ತಾಡಿ ಗ್ರಾಮ ಪಂಚಾಯಿತಿ ವರೆಗೆ ನಡೆದ ಸಂವಿಧಾನ ಜಾಗೃತಿ ಜಾಥಾ, ಸ್ತಬ್ಧ ಚಿತ್ರ ಮೆರವಣಿಗೆ, ಬೈಕ್ ರ‍್ಯಾಲಿ ನಡೆಸಲಾಯಿತು.

ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ದಲಿತ ನಾಯಕ ಮಂಜುನಾಥ ಗಿಳಿಯಾರು ಮಾತನಾಡಿ, ಸಾರ್ವಜನಿಕರಲ್ಲಿ ಸಂವಿಧಾನದ ಮಹತ್ವದ ಕುರಿತು ಅರಿವು ಮೂಡಿಸುವ ಅಗತ್ಯತೆ ಇದೆ. ಮುಂದಿನ ಪೀಳಿಗೆಗೆ ಸಂವಿಧಾನದ ಅರಿವು ಮೂಡಿಸುವ ಕೆಲಸ ಆಗಬೇಕಿದೆ ಎಂದು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖಾ ಅಧಿಕಾರಿ ರೋಷನ್ ಕುಮಾರ್ ಅವರು ಉಪಸ್ಥಿತರಿದ್ದ ಗ್ರಾಮಸ್ಥರಿಗೆ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಶಾಲೆಗಳಿಗೆ ಏರ್ಪಡಿಸಿದ ಸಂವಿಧಾನ ಕುರಿತಾದ ಭಾಷಣ, ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಪಂಚಾಯಿತಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ನೋಡಲ್ ಅಧಿಕಾರಿಯ ಪ್ರದೀಪ ಕೊಂಡೊಜೆ, ಬ್ರಹ್ಮಾವರ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಚ್.ವಿ ಇಂಬ್ರಾಹಿಂ ಪುರ್, ಸಮಾಜ ಕಲ್ಯಾಣ ಇಲಾಖೆಯ ಪತ್ರಾಂಕಿತ ವ್ಯವಸ್ಥಾಪಕ ರೋಷನ್ ಕುಮಾರ್, ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ ಅಧೀಕ್ಷಕ ವಿಶ್ವನಾಥ ಶೆಟ್ಟಿ, ಶಿಕ್ಷಣ ಸಂಯೋಜಕ ರಾಘವ ಶೆಟ್ಟಿ, ಭಾಗೀರಥಿ, ಚಂದ್ರ ಯಡ್ತಾಡಿ, ಪಂಚಾಯಿತಿ ಎಲ್ಲಾ ಸದಸ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿನೋದ ಕಾಮತ್ ಸ್ವಾಗತಿಸಿದರು. ಪಂಚಾಯಿತಿ ಸದಸ್ಯ ಬಾಬು ನಾಯ್ಕ್ ನಿರೂಪಿಸಿದರು. ಸಿಬ್ಬಂದಿ ಕಲ್ಲಪ್ಪ ಯಡ್ತಾಡಿ ವಂದಿಸಿದರು.