ಸಾರಾಂಶ
ಯಡೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮದ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ ಶುಕ್ರವಾರ ನಡೆಯಿತು.
ಕನ್ನಡಪ್ರಭ ವಾರ್ತೆ ಸೋಮವಾರಪೇಟೆ
ಯಡೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮದ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ ಶುಕ್ರವಾರ ನಡೆಯಿತು.ಗ್ರಾಮದ ಹಿರಿಯರಾದ ಟಿ.ಎಂ. ಪುಪ್ಪಯ್ಯ ತರಗತಿಗಳನ್ನು ಉದ್ಘಾಟಿಸಿ ಮಾತನಾಡಿ, ಆಂಗ್ಲ ಮಾಧ್ಯಮದ ಮೂಲಕ ನೀಡಲಾಗುವ ಶಿಕ್ಷಣದಿಂದ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳವಾಗುವುದು. ಇದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದ್ದು, ಸ್ಥಳೀಯರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದರು.ಈ ಸಂದರ್ಭ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕುಮಾರಸ್ವಾಮಿ ಮತ್ತು ಸದಸ್ಯರು, ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷ ಸುರೇಶ್, ಶಾಲಾ ಮುಖ್ಯಶಿಕ್ಷಕಿ ಎಲ್.ಎಂ. ಪ್ರೇಮ, ಗ್ರಾಮಸ್ಥರು ಶಾಲಾ ಶಿಕ್ಷಕರು ಪೋಷಕರು ಭಾಗವಹಿಸಿದ್ದರು.ಶಾಲೆಗೆ ಬೆಂಚ್ ಡೆಸ್ಕ್ ಕೊಡುಗೆ:ನೂತನವಾಗಿ ಪ್ರಾರಂಭವಾದ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗೆ ಶಾಲೆಯ ಹಳೆ ವಿದ್ಯಾರ್ಥಿ, ಬೆಂಗಳೂರಿನಲ್ಲಿ ಮಲ್ನಾಡ್ ಸ್ಪೈಸಸ್ ಆ್ಯಂಡ್ ಮೋರ್ ಉದ್ಯೋಗಿ ರಕ್ಷಿತ್, ಬೆಂಚ್ ಡೆಸ್ಕ್‌ಗಳನ್ನು ಕೊಡುಗೆಯಾಗಿ ನೀಡಿದರು.