ಸಾರಾಂಶ
ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಯಾವುದೇ ಗೊಂದಲವಿಲ್ಲದೆ ಈ ಬಾರಿ ಮೈತ್ರಿ ಅಭ್ಯರ್ಥಿಗೆ ಮತ ನೀಡಬೇಕು ಹಾಗೂ ಯದುವೀರ್ ಒಡೆಯರ್ ಅವರು ರಾಜನೆಂಬ ಯಾವುದೇ ಹಂಬಲವಿಲ್ಲದೇ, ಒಬ್ಬ ಜನ ಸಾಮಾನ್ಯರಾಗಿ ಜನರಿಗೆ ಸ್ಪಂದಿಸುವ ವ್ಯಕ್ತಯಾಗಿದ್ದಾರೆ. ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹನಿಗಿಂತಲೂ ಹೆಚ್ಚು ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಜನರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗುತ್ತಾರೆ, ಆದ್ದರಿಂದ ಈ ಬಾರಿ ಪಿರಿಯಾಪಟ್ಟಣ ತಾಲೂಕಿನಲ್ಲಿ ಅತೀ ಹೆಚ್ಚು ಮತಗಳನ್ನು ನೀಡುವಂತೆ ಮನವಿ
ಕನ್ನಡಪ್ರಭ ವಾರ್ತೆ ರಾವಂದೂರು
ನವಭಾರತದ ನಿರ್ಮಾಣದ ಹಿತದೃಷ್ಟಿಯಿಂದ ಬಿಜೆಪಿಗೆ ಮತ ನೀಡುವಂತೆ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.ಪಿರಿಯಾಪಟ್ಟಣ ತಾಲೂಕು ರಾವಂದೂರು ಗ್ರಾಮಕ್ಕೆ ಭೇಟಿ ನೀಡಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾದ ನನಗೆ ಮತ ನೀಡುವ ಮೂಲಕ ಮತ್ತೊಮ್ಮೆ ಧಾನಮಂತ್ರಿಯಾಗಲು ಮೋದಿ ಅವರಿಗೆ ಬೆಂಬಲ ನೀಡುವಂತೆ ಮನವಿ ಮಾಡಿದರು.
ದೇಶದ ಏಕತೆ ಹಾಗೂ ಅಭಿವೃದ್ಧಿಯ ಹಿತದೃಷ್ಟಿಯಿಂದ ಬಿಜೆಪಿ ಬೆಂಬಲಿಸಿ ಹಾಗೂ ನಾನು ರಾಜನಾದರೂ ಜನಸಾಮಾನ್ಯರ ಸಮಸ್ಯೆಗಳಿಗೆ ಒಬ್ಬ ಸೇವಕನಾಗಿ ಕೆಲಸ ನಿರ್ವಹಿಸುತ್ತೇನೆ ಹಾಗೂ ನಮ್ಮ ತಂದೆಯವರು ಸಂಸದರಾಗಿದ್ದಾಗ ಹಲವಾರು ಜನಪರ ಯೋಜನೆಗಳು ನನ್ನ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದು ತಿಳಿಸಿದರು.ಮಾಜಿ ಶಾಸಕ ಕೆ. ಮಹದೇವ್ ಮಾತನಾಡಿ, ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಯಾವುದೇ ಗೊಂದಲವಿಲ್ಲದೆ ಈ ಬಾರಿ ಮೈತ್ರಿ ಅಭ್ಯರ್ಥಿಗೆ ಮತ ನೀಡಬೇಕು ಹಾಗೂ ಯದುವೀರ್ ಒಡೆಯರ್ ಅವರು ರಾಜನೆಂಬ ಯಾವುದೇ ಹಂಬಲವಿಲ್ಲದೇ, ಒಬ್ಬ ಜನ ಸಾಮಾನ್ಯರಾಗಿ ಜನರಿಗೆ ಸ್ಪಂದಿಸುವ ವ್ಯಕ್ತಯಾಗಿದ್ದಾರೆ. ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹನಿಗಿಂತಲೂ ಹೆಚ್ಚು ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಜನರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗುತ್ತಾರೆ, ಆದ್ದರಿಂದ ಈ ಬಾರಿ ಪಿರಿಯಾಪಟ್ಟಣ ತಾಲೂಕಿನಲ್ಲಿ ಅತೀ ಹೆಚ್ಚು ಮತಗಳನ್ನು ನೀಡುವಂತೆ ಮನವಿ ಮಾಡಿದರು.
ಮಾಜಿ ಶಾಸಕ ಎಚ್.ಸಿ. ಬಸವರಾಜು ಮಾತನಾಡಿದರು. ಮೈಸೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಪ್ರಶಾಂತ್ ಗೌಡ, ಚಂದ್ರಪ್ರಭಾ ಅರಸ್ ಅವರ ಪುತ್ರ ಮಂಜುನಾಥ್, ತಾಲೂಕು ಬಿಜೆಪಿ ಅಧ್ಯಕ್ಷ ರಾಜೇಂದ್ರ, ಜೆಡಿಎಸ್ ಅಧ್ಯಕ್ಷ ಅಣ್ಣಯ್ಯಶೆಟ್ಟಿ, ಆರ್.ಟಿ. ಸತೀಶ್, ಟಿಎಪಿಸಿಎಂಎಸ್ ಅಧ್ಯಕ್ಷ ಎಚ್.ಡಿ. ವಿಜಯ್, ಕೌನಹಳ್ಳಿ ಸೋಮಶೇಖರ್, ಕಿರಣ್ ಜಯರಾಮ್, ಅಭಿ ಆರಾಧ್ಯ, ಸುಪ್ರೀತ್, ಆರ್.ಆರ್. ಮೋಹನ್, ಕೆ.ಆರ್. ಮಹದೇವ್, ಶಿವಾರಾಧ್ಯ, ನಳಿನಿ, ಸುನೀತ ಮಂಜುನಾಥ್ ಇದ್ದರು.;Resize=(128,128))
;Resize=(128,128))
;Resize=(128,128))
;Resize=(128,128))