ಸಾರಾಂಶ
ಕೊಡಗಿನಲ್ಲಿ ಲೋಕಸಭೆ ಚುನಾವಣೆಗೆ ಮತದಾನ ಗುರುವಾರ ನಡೆಯಲಿದೆ. ಬಹಿರಂಗ ಪ್ರಚಾರದ ಅಂತಿಮ ದಿನ ಬುಧವಾರ, ಮಡಿಕೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರಚಾರ ನಡೆಸಿ ಮತಯಾಚನೆ ನಡೆಸಿದರು. ನಟಿ, ಮಾಜಿ ಎಂ.ಎಲ್.ಸಿ. ತಾರಾ ಅನುರಾಧಾ ಸಾಥ್ ನೀಡಿದರು.
ಕನ್ನಡಪ್ರಭ ವಾರ್ತೆ ಮಡಿಕೇರಿ
ನಗರದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಬುಧವಾರ ಪ್ರಚಾರ ನಡೆಸಿ ಮತಯಾಚನೆ ನಡೆಸಿದರು. ನಗರದ ಚೌಡೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಕಾರ್ಯಕರ್ತರೊಡನೆ ರೋಡ್ ಶೋ ನಡೆಸಿ ಪ್ರಚಾರದಲ್ಲಿ ತೊಡಗಿಸಿಕೊಂಡರು. ಇವರಿಗೆ ಕನ್ನಡ ಚಿತ್ರರಂಗದ ಹೆಸರಾಂತ ನಟಿ, ಮಾಜಿ ಎಂ.ಎಲ್.ಸಿ. ತಾರಾ ಅನುರಾಧಾ ಸಾಥ್ ನೀಡಿದರು.ಮಹದೇಪೇಟೆಯಿಂದ ಇಂದಿರಾಗಾಂದಿ ವೃತ್ತದ ಮೂಲಕ ಜನರಲ್ ತಿಮ್ಮಯ್ಯ ವೃತ್ತದ ತನಕ ಮೆರವಣಿಗೆ ನಡೆಸಿದರು.
ಪ್ರಚಾರ ವೇಳೆಯಲ್ಲಿ ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ, ಮಾಜಿ ಶಾಸಕ ಕೆ.ಜಿ. ಬೋಪಯ್ಯ, ಮಾಜಿ ಎಂ.ಎಲ್.ಸಿ. ಎಸ್.ಜಿ. ಮೇದಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿಕಾಳಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೈನಿ, ನೆಲ್ಲೀರ ಚಲನ್ ಕುಮಾರ್, ವಿ.ಕೆ. ಲೋಕೇಶ್, ಉಪಾಧ್ಯಕ್ಷ ಮನು ಮಂಜುನಾಥ್, ಕಾಂಗೀರ ಸತೀಶ್, ವಕ್ತಾರರಾದ ಬಿ.ಕೆ. ಅರುಣ್ ಕುಮಾರ್, ತಳೂರು ಕಿಶೋರ್ ಕುಮಾರ್, ಮಹಿಳಾ ಮೋರ್ಚಾ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ರೈತ ಮೋರ್ಚಾ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಹಿಂದುಳಿದ ಮೋರ್ಚಾದ ಜಿಲ್ಲಾಧ್ಯಕ್ಷ ಅಫ್ರು ರವೀಂದ್ರ, ನಗರಾಧ್ಯಕ್ಷ ಉಮೇಶ್ ಸುಬ್ರಮಣಿ, ಬಿ.ಕೆ. ಜಗದೀಶ್, ಪ್ರಧಾನ ಕಾರ್ಯದರ್ಶಿ ಬಿ.ಕೆ. ಜಗದೀಶ್, ಕಾರ್ಯದರ್ಶಿ ಕವನ್ ಕಾವೇರಪ್ಪ, ಪಟ್ಟಡ ರೀನಾ ಪ್ರಕಾಶ್, ಮಾಪಂಗಡ ಯಮುನಾ ಚಂಗಪ್ಪ, ಮಾಜಿ ಜಿಲ್ಲಾಧ್ಯಕ್ಷ ಪಳೆಯಂಡ ರಾಬಿನ್ ದೇವಯ್ಯ ಮತ್ತಿತರರಿದ್ದರು.