ಸಾರಾಂಶ
ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ನಿಲ್ದಾಣ ವಿಸ್ತರಣೆ ಕಾಮಗಾರಿ ಸಂಬಂಧ ಅಧಿಕಾರಿಗಳೊಡನೆ ಚರ್ಚಿಸಿದರು
ಕನ್ನಡಪ್ರಭ ವಾರ್ತೆ ಮೈಸೂರು
ಸಂಸದ ಯದುವೀರ್ ಅವರು ಬುಧವಾರ ಮೈಸೂರು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ನಿಲ್ದಾಣ ವಿಸ್ತರಣೆ ಕಾಮಗಾರಿ ಸಂಬಂಧ ಅಧಿಕಾರಿಗಳೊಡನೆ ಚರ್ಚಿಸಿದರು.ವಿಮಾನ ನಿಲ್ದಾಣದ ನಿರ್ದೇಶಕ ಅನೂಪ್ ಮತ್ತು ಇತರ ಅಧಿಕಾರಿಗಳ ಜತೆ ಸುಧೀರ್ಘ ಚರ್ಚೆ ನಡೆಸಿದರು. ಮೈಸೂರು ವಿಮಾನ ನಿಲ್ದಾಣದಲ್ಲಿ ದೊರೆಯುವ ಸೌಲಭ್ಯಗಳ ಸಂಪೂರ್ಣ ಮಾಹಿತಿ ಸಂಗ್ರಹಿಸಿದರು.
ಮೈಸೂರು ವಿಮಾನದ ಮೊದಲ ಹಂತ ಮತ್ತು ಎರಡನೇ ಹಂತದ ಅಭಿವೃದ್ಧಿಗೆ ಕೈಗೊಂಡಿರುವ ಕ್ರಮಗಳ ಕುರಿತು ಅಧಿಕಾರಿಗಳಿಂದ ವಿವರವಾದ ಮಾಹಿತಿ ಕಲೆ ಹಾಕಿದರು.ಮೈಸೂರು ವಿಮಾನ ನಿಲ್ದಾಣವನ್ನು ಸಂಪೂರ್ಣವಾಗಿ ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ನಾಗರಿಕ ವಿಮಾನಯಾನ ಸಚಿವಾಲಯವು ಸಂಪೂರ್ಣ ಬೆಂಬಲ ನೀಡುತ್ತದೆ ಮತ್ತು ನಮ್ಮ ನಗರದ ವಿಮಾನ ನಿಲ್ದಾಣವು ಅತ್ಯುನ್ನತ ಗುಣಮಟ್ಟವನ್ನು ಹೊಂದಿದೆ ಎಂದರು.
ಮೈಸೂರು- ಕೊಡಗು ಸಂಪರ್ಕಕ್ಕೆ ಮೈಸೂರು ವಿಮಾನ ನಿಲ್ದಾಣವನ್ನು ಕೇಂದ್ರವಾಗಿಸುವುದು ನಮ್ಮ ಗುರಿಯಾಗಿದೆ. ಈ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲಾ ಪ್ರಯತ್ನ ನಡೆಸುವುದಾಗಿ ಅವರು ಹೇಳಿದರು.