ಶೃಂಗೇರಿ ಶ್ರೀ ಶಾರದೆ ವಿಶೇಷ ಪೂಜೆ ಸಲ್ಲಿಸಿದ ಯದುವೀರ್ ಒಡೆಯರ್‌

| Published : Sep 21 2025, 02:00 AM IST

ಶೃಂಗೇರಿ ಶ್ರೀ ಶಾರದೆ ವಿಶೇಷ ಪೂಜೆ ಸಲ್ಲಿಸಿದ ಯದುವೀರ್ ಒಡೆಯರ್‌
Share this Article
  • FB
  • TW
  • Linkdin
  • Email

ಸಾರಾಂಶ

ಶೃಂಗೇರಿ, ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠಕ್ಕೆ ಮೈಸೂರು ಮಹಾರಾಜ ಹಾಗೂ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ಶ್ರೀ ಶಾರದಾಂಬೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಜಗದ್ಗುರು ಶ್ರೀ ಭಾರತೀ ತೀರ್ಥ, ಶ್ರೀ ವಿಧುಶೇಖರ ಭಾರತೀ ಸ್ವಾಮಿ ಭೇಟಿ

ಕನ್ನಡಪ್ರಭ ವಾರ್ತೆ, ಶೃಂಗೇರಿ

ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠಕ್ಕೆ ಮೈಸೂರು ಮಹಾರಾಜ ಹಾಗೂ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ಶ್ರೀ ಶಾರದಾಂಬೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಗುರುವಾರ ಶ್ರೀ ಮಠಕ್ಕೆ ಆಗಮಿಸಿ ಶ್ರೀ ಶಾರದಾದೇವಿ ದೇವಾಲಯಕ್ಕೆ ತೆರಳಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ನಂತರ ಶ್ರೀ ಶಂಕರಾಚಾರ್ಯ ದೇವಾಲಯ, ಶ್ರೀ ತೋರಣಗಣಪತಿ,ಶ್ರೀ ವಿದ್ಯಾಶಂಕರ ದೇವಾಲಯ,ಶ್ರೀ ಸುಬ್ರಮಣ್ಯ,ಶ್ರೀ ಜನಾರ್ದನ ಸ್ವಾಮಿ ದೇವಾಲಯಗಳಿಗೆ ಭೇಟಿ ನೀಡಿ ದರ್ಶನ ಪಡೆದರು.

ಶ್ರೀ ಮಠದದಲ್ಲಿನ ಶ್ರೀ ಗುರುಭವನಕ್ಕೆ ತೆರಳಿ ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸ್ವಾಮಿ ಹಾಗೂ ಶ್ರೀ ವಿಧುಶೇಖರ ಭಾರತೀ ಸ್ವಾಮಿ ಭೇಟಿ ಮಾಡಿ ಆಶೀರ್ವಾದ ಪಡೆದರು. ಶುಕ್ರವಾರವೂ ಶೃಂಗೇರಿಯಲ್ಲಿಯೇ ವಾಸ್ತವ್ಯ ಹೂಡಿ ಶ್ರೀ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿ ನಂತರ ತೆರಳಿದರು. ಮೈಸೂರು ಸಂಸ್ಥಾನ ಹಿಂದಿನಿಂದಲೂ ಶೃಂಗೇರಿ ಪೀಠದೊಂದಿಗೆ ಅವಿನಾಭಾವ ಸಂಬಂಧಹೊಂದಿದೆ.

ಮೈಸೂರು ಸಂಸ್ಥಾನದ ಒಡೆಯರ್ ವಂಶದ ಮಹಾರಾಜರೆಲ್ಲರೂ ಶೃಂಗೇರಿ ಪೀಠಕ್ಕೆ ಭೇಟಿ ನೀಡಿ ಶಾರದಾಂಬೆಗೆ ವಿಶೇಷ ಪೂಜೆ, ಜಗದ್ಗುರುಗಳ ಭೇಟಿ ಮಾಡಿ ಆಶೀರ್ವಾದ ಪಡೆಯುವುದು ಸಂಪ್ರದಾಯ. ಪಟ್ಟಾಭಿಷೇಕಕ್ಕೂ ಮೊದಲು ಯದುವೀರ್ ತಾಯಿ ಪ್ರಮೋದಾ ದೇವಿಯೊಡನೆ ಶೃಂಗೇರಿ ಪೀಠಕ್ಕೆ ಭೇಟಿ ನೀಡಿ ಶಾರದೆಗೆ ವಿಶೇಷ ಪೂಜೆ, ಉಭಯ ಜಗದ್ಗುರುಗಳ ಆಶೀರ್ವಾದ ಪಡೆದುಕೊಂಡು ಹೋಗಿದ್ದರು.

20 ಶ್ರೀ ಚಿತ್ರ 2-

ಶೃಂಗೇರಿ ಶ್ರೀ ಮಠದ ಗುರುಭವನದಲ್ಲಿ ಮೈಸೂರು ಮಹಾರಾಜ, ಸಂಸದ ಯಧುವೀರ್ ಉಭಯ ಜಗದ್ಗುರುಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆಯುತ್ತಿರುವುದು.