ಯದುವೀರ್ ಒಡೆಯರ್ ಚುನಾವಣಾ ಪ್ರಚಾರ

| Published : Apr 09 2024, 12:48 AM IST

ಸಾರಾಂಶ

ನರೇಂದ್ರ ಮೋದಿ ಪ್ರಧಾನಿಯಾದ ಮೇಲೆ ದೇಶ ಅಭಿವೃದ್ಧಿ ಸಾಧಿಸುತ್ತಿದೆ. ವಿಶ್ವವೇ ದೇಶವನ್ನು ನೋಡುತ್ತಿದೆ.

ಕನ್ನಡಪ್ರಭ ವಾರ್ತೆ ಶನಿವಾರಸಂತೆ

ಭಾರತ 2047ರ ಹೊತ್ತಿಗೆ ವಿಶ್ವದ ಏಕೈಕ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಬೇಕೆಂಬ ಧ್ಯೇಯೋದ್ದೇಶ ಹೊಂದಿರುವ ಪ್ರಧಾನಿ ನರೇಂದ್ರಮೋದಿ ಅವರು ಮತ್ತೊಮ್ಮೆ ರಾಷ್ಟ್ರದ ಪ್ರಧಾನ ಮಂತ್ರಿ ಆಗಬೇಕಿದೆ ಎಂದು ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಹೇಳಿದರು.

ಅವರು ಶನಿವಾರಸಂತೆ ಯಶಸ್ವಿನಿ ಕಲ್ಯಾಣ ಮಂಟಪದಲ್ಲಿ ಇದೇ 26 ರಂದು ನಡೆಯಲಿರುವ ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾಂಗ್ರೆಸ್ ಅಧಿಕಾರದಲ್ಲಿದ್ದ ಅವಧಿಯಲ್ಲಿ ನಮ್ಮ ದೇಶದ ಅಭಿವೃದ್ಧಿ ಕುಂಠಿತಗೊಂಡಿತ್ತು. ನರೇಂದ್ರಮೋದಿ ಅವರು ಪ್ರಧಾನ ಮಂತ್ರಿ ಆದ ಮೇಲೆ ನಮ್ಮ ದೇಶ ಅಭಿವೃದ್ಧಿ ಸಾಧಿಸುತ್ತಿರುವ ಜೊತೆಯಲ್ಲಿ ಆರ್ಥಿಕ ಅಭಿವೃದ್ಧಿಯಲ್ಲಿ ವಿಶ್ವದ ಗಮನ ಸೆಳೆದಿದೆ. ವಿಶ್ವವೇ ನಮ್ಮ ದೇಶವನ್ನು ತಿರುಗಿ ನೋಡುತ್ತಿದೆ ಎಂದರು.

ನರೇಂದ್ರ ಮೋದಿ ಅವರು ಮತ್ತೊಮ್ಮೆ ರಾಷ್ಟ್ರದ ಪ್ರಧಾನ ಮಂತ್ರಿ ಆಗಬೇಕಿದೆ.

ವಿರಾಜಪೇಟೆ ಕ್ಷೇತ್ರದ ಮಾಜಿ ಶಾಸಕ ಕೆ. ಜಿ. ಬೋಪಯ್ಯ ಮಾತನಾಡಿ, ಕಾಂಗ್ರೆಸ್ ಕೇವಲ ಗ್ಯಾರೆಂಟಿ ಕೊಡುವುದರಲ್ಲೇ ಕಾಲ ಕಳೆಯುತ್ತಿದೆ. ಹಿಂದೆ ನಡೆದ ವಿಧಾನ ಸಭಾ ಚುನಾವಣೆಯಲ್ಲಿ 5 ಗ್ಯಾರೆಂಟಿ ಈಗ ಲೋಕಸಭಾ ಚುನಾವಣೆಯಲ್ಲಿ 25 ಗ್ಯಾರೆಂಟಿಗಳನ್ನು ಮುಂದಿಟ್ಟಿದೆ ಎಂದು ಲೇವಡಿ ಮಾಡಿದರು.

ಮಡಿಕೇರಿ ಕ್ಷೇತ್ರದ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ರವಿ ಕಾಳಪ್ಪ, ಎಂಎಲ್‍ಸಿ ಸುಜಾ ಕುಶಾಲಪ್ಪ, ಜೆಡಿಎಸ್ ಮುಖಂಡ ವಿಶ್ವ ಮಾತನಾಡಿದರು. ಕಾರ್ಯಕ್ರಮದಲ್ಲಿ ಬಿಜೆಪಿ ಪ್ರಮುಖರಾದ ಎಸ್.ಜೆ.ಮೇದಪ್ಪ, ಮಾಜಿ ಎಂಎಲ್‍ಸಿ ಸನಿಲ್ ಸುಬ್ರಮಣಿ, ಮಹೇಶ್ ಜೈನ್, ರಾಬೀನ್ ದೇವಯ್ಯ, ಎಸ್.ಎನ್.ರಘು, ಭುವನೇಶ್ವರಿ ಹರೀಶ್, ಜೆಡಿಎಸ್ ಮುಖಂಡ ನಾಗೇಶ್ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಹಾಜರಿದ್ದರು.