ವಿವಿಧ ಕ್ಷೇತ್ರಗಳ ಸಾಧಕರಿಗೆ ಯಕ್ಷಧ್ರುವ ಕಲಾ ಗೌರವ

| Published : May 27 2024, 01:07 AM IST

ಸಾರಾಂಶ

ಅಡ್ಯಾರ್‌ ಗಾರ್ಡನ್‌ನಲ್ಲಿ ‘ಯಕ್ಷಧ್ರುವ ಪಟ್ಲ ಸಂಭ್ರಮ’ ಭಾನುವಾರ ವಿವಿಧ ಕಾರ್ಯಕ್ರಮಗಳೊಂದಿಗೆ ಜರುಗಿತು. ಮುಂಬೈನ ಹೇರಂಭ ಕೆಮಿಕಲ್ಸ್ ಇಂಡಸ್ಟ್ರೀಸ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ನಗರದ ಅಡ್ಯಾರ್‌ ಗಾರ್ಡನ್‌ನಲ್ಲಿ ‘ಯಕ್ಷಧ್ರುವ ಪಟ್ಲ ಸಂಭ್ರಮ’ ಭಾನುವಾರ ವಿವಿಧ ಕಾರ್ಯಕ್ರಮಗಳೊಂದಿಗೆ ಜರುಗಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತಾಡಿದ ಮುಂಬೈನ ಹೇರಂಭ ಕೆಮಿಕಲ್ಸ್ ಇಂಡಸ್ಟ್ರೀಸ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ, ಯಕ್ಷಗಾನ ಕಲಾವಿದರ ಸಂಕಷ್ಟಕ್ಕೆ ನೆರವಾಗುವ ದೃಷ್ಟಿಯಲ್ಲಿ ದಾನಿಗಳನ್ನು ಒಗ್ಗೂಡಿಸಿಕೊಂಡು ಪಟ್ಲ ಸತೀಶ್ ಶೆಟ್ಟಿ ಸ್ಥಾಪನೆ ಮಾಡಿದ ಯಕ್ಷಧ್ರುವ ಪಟ್ಲ ಫೌಂಡೇಶನ್‌ನೊಂದಿಗೆ ನಾವೆಲ್ಲರೂ ಜತೆಗೂಡಿದ್ದೇವೆ ಎಂದು ಹೇಳಿದರು.

ಆಶೀರ್ವಚನಗೈದ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ, 40 ವಿವಿಧ ಊರುಗಳಲ್ಲಿ ಸಂಘಟನೆ ವಿಸ್ತರಿಸಲ್ಪಟ್ಟಿದ್ದು, ಪಟ್ಲ ಸತೀಶ್ ಶೆಟ್ಟಿ ನೇತೃತ್ವದಲ್ಲಿ ಸಾರ್ಥಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿರುವುದು ಸಂತಸದ ವಿಷಯ ಎಂದರು.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಶ್ರೀ ಕ್ಷೇತ್ರ ಕಟೀಲಿನ ಅನುವಂಶಿಕ ಪ್ರಧಾನ ಅರ್ಚಕ ವೆಂಕಟ್ರಮಣ ಅಸ್ರಣ್ಣ ಮಾತನಾಡಿದರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾಪಕ ಪಟ್ಲ ಸತೀಶ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ವಿವಿಧ ಕ್ಷೇತ್ರಗಳ ಸಾಧಕರಿಗೆ 2024ರ ಯಕ್ಷಧ್ರುವ ಕಲಾ ಗೌರವ ಸಮರ್ಪಿಸಲಾಯಿತು. ವೈದಿಕ ಕ್ಷೇತ್ರದಲ್ಲಿನ ಸಾಧನೆಗಾಗಿ ಡಾ. ಯಾಜಿ ನಿರಂಜನ್ ಭಟ್, ಮಾಧ್ಯಮ ಕ್ಷೇತ್ರದಲ್ಲಿ ಚಿದಂಬರ ಬೈಕಂಪಾಡಿ, ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿರುವ ಲೆ.ಕ. ವಿನ್ಸೆಂಟ್ ಡಿಸೋಜ, ಕಮಾಂಡರ್ ಶಾಮ್ ರಾಜ್, ಕಲಾ ಸಂಘಟನೆಗಾಗಿ ಯಕ್ಷಗಾನ ಅಭ್ಯಾಸ ತರಬೇತಿ ದುಬೈ, ಶಾಸ್ತ್ರೀಯ ಸಂಗೀತಕ್ಕಾಗಿ ಕುದುಮಾರು ಎಸ್. ವೆಂಕಟರಾವ್, ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಡಾ. ರಮಾನಂದ ಬನಾರಿ, ಹರಿಕಥೆ ಜಗದೀಶ್ ದಾಸ್ ಪೊಳಲಿ, ರಂಗಭೂಮಿ ಸಾಧನೆಗಾಗಿ ಲಕ್ಷ್ಮಣ ಕುಮಾರ್ ಮಲ್ಲೂರು, ಭರತನಾಟ್ಯ ಕಮಲಾಕ್ಷ ಆಚಾರ್ ಬೆಳ್ತಂಗಡಿ, ಕಂಬಳ ಕ್ಷೇತ್ರದಲ್ಲಿ ಅಶೋಕ್ ಶೆಟ್ಟಿ ಬೇಲಾಡಿ, ಯಕ್ಷಗಾನ ಚಿದಂಬರ ಬಾಬು ಪೂಜಾರಿ, ಯಕ್ಷಗಾನ(ಬಡಗು) ನಿರ್ಜೆಡ್ದು ಚಂದ್ರ ಕುಲಾಲ್, ಯಕ್ಷಗುರು ಮಹಾವೀರ ಪಾಂಡಿ, ಹವ್ಯಾಸಿ ಜಗನ್ನಾಥ ಶೆಟ್ಟಿ ಸಚ್ಚರಿಪೇಟೆ, ಮಹಿಳಾ ಪೂರ್ಣಿಮಾ ಯತೀಶ್ ರೈ, ದೈವಾರಾಧನೆ ಕ್ಷೇತ್ರದಲ್ಲಿ ಕೊರಗ ಪಾಣಾರ, ಭಜನೆ ಭೋಜ ಸುವರ್ಣ ಕುಲಶೇಖರ ಅವರನ್ನು ಸನ್ಮಾನಿಸಲಾಯಟಿತು.

ಆರೋಗ್ಯ ಶಿಬಿರವನ್ನು ಕಿಟ್ ನೀಡುವ ಮೂಲಕ ಡಾ.ರವೀಶ್ ತುಂಗಾ ಉದ್ಘಾಟಿಸಿದರು. ರಕ್ತದಾನ ಶಿಬಿರದ ಉದ್ಘಾಟನೆಯನ್ನು ಡಾ. ಶ್ರೀಧರ್ ಶೆಟ್ಟಿ ನೆರವೇರಿಸಿದರು.

ವೇದಿಕೆಯಲ್ಲಿ ಬಡಾಜೆ ರವಿಶಂಕರ್ ಶೆಟ್ಟಿ, ಪಾವಂಜೆ ಕ್ಷೇತ್ರದ ಆಡಳಿತ ಮಂಡಳಿ ಮೊಕ್ತೇಸರ ಶಶೀಂದ್ರ ಕುಮಾರ್, ಡಾ.ಪದ್ಮನಾಭ ಕಾಮತ್, ಬಿಬಿಎಂಪಿ ಜಂಟಿ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ, ಉದ್ಯಮಿ ರಘುನಾಥ್ ಸೋಮಯಾಜಿ, ನಿಟ್ಟೆ ಯೂನಿವರ್ಸಿಟಿಯ ಪ್ರೊ.ಡಾ.ಬಿ. ಸತೀಶ್ ಕುಮಾರ್ ಭಂಡಾರಿ, ಹಿರಿಯ ನ್ಯಾಯವಾದಿ ಭೋಜ ನಾರಾಯಣ ಪೂಜಾರಿ, ಡಾ.ರವೀಶ್ ತುಂಗಾ, ಡಾ.ಶ್ರೀಧರ್ ಶೆಟ್ಟಿ, ಭುವನೇಶ್ ಪಚ್ಚಿನಡ್ಕ, ಪಟ್ಲಗುತ್ತು ಮಹಾಬಲ ಶೆಟ್ಟಿ, ಅಶೋಕ್ ಶೆಟ್ಟಿ ಬೆಳ್ಳಾಡಿ, ಜಯರಾಮ್ ಶೇಖ, ಕರುಣಾಕರ ರೈ ದೇರ್ಲ, ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ, ಬಾಲಕೃಷ್ಣ ಹೆಗ್ಡೆ, ಭುಜಬಲಿ ಧರ್ಮಸ್ಥಳ, ಸುರತ್ಕಲ್ ಘಟಕದ ಅಧ್ಯಕ್ಷ ಸುಧಾಕರ್ ಎಸ್. ಪೂಂಜ, ಸಂತೋಷ್ ಕುಮಾರ್ ರೈ ಬೊಳಿಯಾರ್, ಪ್ರಕಾಶ್ ರಾವ್, ಕೇಂದ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್, ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್ ರೈ, ಸಂಘಟನಾ ಕಾರ್ಯದರ್ಶಿ ಕದ್ರಿ ನವನೀತ ಶೆಟ್ಟಿ, ಪ್ರದೀಪ್ ಆಳ್ವ ಕದ್ರಿ, ಜಗನ್ನಾಥ ಶೆಟ್ಟಿ ಬಾಳ, ಉಪಾಧ್ಯಕ್ಷ ಅಶೋಕ್ ಆರ್. ಶೆಟ್ಟಿ ಪೆರ್ಮುದೆ, ಡಾ. ಮನುರಾವ್, ದುರ್ಗಾಪ್ರಸಾದ್ ಪಿವಿ ಪಡುಬಿದ್ರಿ, ಜತೆ ಕಾರ್ಯದರ್ಶಿ ರಾಜೀವ ಪೂಜಾರಿ ಕೈಕಂಬ, ರವಿಚಂದ್ರ ಶೆಟ್ಟಿ ಅಶೋಕನಗರ ಇದ್ದರು.