ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮ ಸಂಭ್ರಮ ಆಮಂತ್ರಣ ಪತ್ರಿಕೆ ಬಿಡುಗಡೆ

| Published : Apr 01 2025, 12:47 AM IST

ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮ ಸಂಭ್ರಮ ಆಮಂತ್ರಣ ಪತ್ರಿಕೆ ಬಿಡುಗಡೆ
Share this Article
  • FB
  • TW
  • Linkdin
  • Email

ಸಾರಾಂಶ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ದಶಮ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ನಗರದ ಕುದ್ಮುಲ್‌ ರಂಗರಾವ್‌ ಪುರಭವನದಲ್ಲಿ ನಡೆಯಿತು.

ಕಷ್ಟದಲ್ಲಿರುವ ಕಲಾವಿದರಿಗೆ ನೆರವಾಗುವ ಕೈಂಕರ್ಯ ಶ್ಲಾಘನೀಯ: ಕನ್ಯಾನ ಸದಾಶಿವ ಶೆಟ್ಟಿ

ಕನ್ನಡಪ್ರಭ ವಾರ್ತೆ ಮಂಗಳೂರು

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ದಶಮ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ನಗರದ ಕುದ್ಮುಲ್‌ ರಂಗರಾವ್‌ ಪುರಭವನದಲ್ಲಿ ನಡೆಯಿತು.

ಈ ಸಂದರ್ಭ ಮಾತನಾಡಿದ ಪಟ್ಲ ಫೌಂಡೇಶನ್ ಟ್ರಸ್ಟ್‌ ಗೌರವಾಧ್ಯಕ್ಷ ಕನ್ಯಾನ ಸದಾಶಿವ ಶೆಟ್ಟಿ, ಯಕ್ಷಗಾನ ಕ್ಷೇತ್ರವು ಪಟ್ಲ ಸತೀಶ್ ಶೆಟ್ಟಿ ಅವರಿಂದ ನಾಡಿನೆಲ್ಲೆಡೆ ಬೆಳಗುತ್ತಿರುವುದು ಸಂತಸದ ವಿಚಾರ. ಯಕ್ಷಗಾನದ ಮೇಲಿನ ಭಕ್ತಿ ಶ್ರದ್ಧೆಯಿಂದ ನಾವೆಲ್ಲರೂ ಜತೆಯಾಗಿದ್ದೇವೆ. ಕಷ್ಟದಲ್ಲಿರುವ ಕಲಾವಿದರಿಗೆ ನೆರವಾಗುತ್ತಿರುವ ಈ ಸಂಘಟನೆ ಇನ್ನಷ್ಟು ಸಮಾಜಮುಖಿ ಕಾರ್ಯಗಳನ್ನು ಮಾಡಲಿ ಎಂದು ಶುಭ ಹಾರೈಸಿದರು.

ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಮಾತಾಡಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಮೂಲಕ ನೊಂದ ಕಲಾವಿದರಿಗೆ ನೆರವು ನೀಡಿದ ಸಾರ್ಥಕತೆ ಇದೆ. ಇದು ನನ್ನೊಬ್ಬನಿಂದ ಸಾಧ್ಯವಾಗಿಲ್ಲ, ಎಲ್ಲರ ಶ್ರಮದಿಂದ ಕಾರ್ಯರೂಪಕ್ಕೆ ಬಂದಿದೆ. 10ನೇ ವರ್ಷ ಪೂರೈಸುತ್ತಿರುವ ಟ್ರಸ್ಟ್ ವತಿಯಿಂದ ಈ ಬಾರಿ ಸಮಾಜಮುಖಿಯಾದ ಹತ್ತಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಮಹಾಪೋಷಕ ಕೆ.ಕೆ. ಶೆಟ್ಟಿ ಕುತ್ತಿಕಾರ್, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಟ್ರಸ್ಟ್ ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್ ರೈ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್, ಟಿ.ಜಿ. ರಾಜಾರಾಮ್ ಭಟ್, ಯೋಗೀಂದ್ರ ಭಟ್ ಉಳಿ, ಸಂಘಟನಾ ಕಾರ್ಯದರ್ಶಿ ಕದ್ರಿ ನವನೀತ ಶೆಟ್ಟಿ, ಬಾಳ ಜಗನ್ನಾಥ ಶೆಟ್ಟಿ, ಪ್ರದೀಪ್ ಆಳ್ವ ಕದ್ರಿ, ಜತೆ ಕಾರ್ಯದರ್ಶಿ ರಾಜೀವ ಪೂಜಾರಿ ಕೈಕಂಬ, ರವಿಚಂದ್ರ ಶೆಟ್ಟಿ ಅಶೋಕನಗರ, ಉದಯಕುಮಾರ್ ಶೆಟ್ಟಿ ಯಕ್ಷಗಾನ ವಿಧ್ವಾಂಸ ಪ್ರಭಾಕರ ಜೋಷಿ, ಭುಜಬಲಿ ಧರ್ಮಸ್ಥಳ ಮಹಿಳಾ ಘಟಕದ ಅಧ್ಯೆಕ್ಷೆ ಪೂರ್ಣಿಮಾ ಯತೀಶ್ ರೈ, ಗೌರವಾಧ್ಯೆಕ್ಷೆ ಆರತಿ ಆಳ್ವ ಮತ್ತಿತರರು ಇದ್ದರು.

ಮಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್‌ಗೆ ಆಯ್ಕೆಯಾದ ಕನ್ಯಾನ ಸದಾಶಿವ ಶೆಟ್ಟಿ ಅವರನ್ನು ಪಟ್ಲ ಫೌಂಡೇಶನ್ ಟ್ರಸ್ಟ್‌ನಿಂದ ಗೌರವಿಸಲಾಯಿತು.