ಯಕ್ಷಗಾನ ಕಲಾರಂಗ ೪೯ನೇ ವಾರ್ಷಿಕ ಮಹಾಸಭೆ

| Published : Jul 24 2024, 12:29 AM IST

ಸಾರಾಂಶ

ಸಂಸ್ಥೆಯ ಹಿರಿಯ ಸದಸ್ಯ ಯು. ಶ್ರೀಧರ್ ಉದ್ಘಾಟಿಸಿದರು. ಮಹಾಸಭೆಯ ಕಲಾಪಗಳಾದ ಗತ ಮಹಾಸಭೆಯ ವರದಿ, ವಾರ್ಷಿಕ ವರದಿ, ಪರಿಶೋಧಿತ ಲೆಕ್ಕಪತ್ರ ಮಂಡನೆಗಳನ್ನು ಕ್ರಮವಾಗಿ ಜೊತೆ ಕಾರ್ಯದರ್ಶಿ ಎಚ್.ಎನ್. ಶೃಂಗೇಶ್ವರ್, ಕಾರ್ಯದರ್ಶಿ ಮುರಲಿ ಕಡೆಕಾರ್ ಹಾಗೂ ಕೋಶಾಧಿಕಾರಿ ಪ್ರೊ. ಕೆ.ಸದಾಶಿವ ರಾವ್ ಮಾಡಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಉಡುಪಿಯ ಸಾಂಸ್ಕೃತಿಕ, ಸಾಮಾಜಿಕ ಸಂಘಟನೆ ಯಕ್ಷಗಾನ ಕಲಾರಂಗದ ೪೯ನೇ ವಾರ್ಷಿಕ ಮಹಾಸಭೆಯು ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್‌ಮೆಂಟ್ ರಿಸರ್ಚ್ ಆ್ಯಂಡ್ ಟ್ರೈನಿಂಗ್ ಸೆಂಟರ್‌ನಲ್ಲಿ ಎಂ. ಗಂಗಾಧರ ರಾವ್‌ ಅಧ್ಯಕ್ಷತೆಯಲ್ಲಿ ನಡೆಯಿತು.

ಸಂಸ್ಥೆಯ ಹಿರಿಯ ಸದಸ್ಯ ಯು. ಶ್ರೀಧರ್ ಉದ್ಘಾಟಿಸಿದರು. ಮಹಾಸಭೆಯ ಕಲಾಪಗಳಾದ ಗತ ಮಹಾಸಭೆಯ ವರದಿ, ವಾರ್ಷಿಕ ವರದಿ, ಪರಿಶೋಧಿತ ಲೆಕ್ಕಪತ್ರ ಮಂಡನೆಗಳನ್ನು ಕ್ರಮವಾಗಿ ಜೊತೆ ಕಾರ್ಯದರ್ಶಿ ಎಚ್.ಎನ್. ಶೃಂಗೇಶ್ವರ್, ಕಾರ್ಯದರ್ಶಿ ಮುರಲಿ ಕಡೆಕಾರ್ ಹಾಗೂ ಕೋಶಾಧಿಕಾರಿ ಪ್ರೊ. ಕೆ.ಸದಾಶಿವ ರಾವ್ ಮಾಡಿದರು.

ಪ್ರಸ್ತುತ ವರದಿ ವರ್ಷವು ಸುವರ್ಣ ವರ್ಷವಾಗಿರುವುದರಿಂದ ವಿಶಿಷ್ಟವಾಗಿ ಆಚರಿಸಲು ತೀರ್ಮಾನಿಸಲಾಯಿತು ಹಾಗೆಯೇ ಸದಸ್ಯತನದ ಮೊತ್ತವನ್ನು ವೃದ್ಧಿಸುವರೇ ನಿರ್ಣಯ ಕೈಗೊಳ್ಳಲಾಯಿತು.

ಅನಂತರ ಕಾರ್ಯಕಾರಿ ಸಮಿತಿ ಮತ್ತು ಸಲಹಾ ಸಮಿತಿಗೆ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಲೆಕ್ಕಪರಿಶೋಧಕರಾಗಿ ಸಿಎ ಅರುಣ್ ನಾಯಕ್‌ ಅವರನ್ನು ನೇಮಕಗೊಳಿಸಲಾಯಿತು. ಸಂಸ್ಥೆಯ ಮಾಜಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಮತ್ತು ನಿಕಟಪೂರ್ವ ಅಧ್ಯಕ್ಷ ಕೆ. ಗಣೇಶ್ ರಾವ್ ಮಾರ್ಗದರ್ಶನದ ಮಾತುಗಳನ್ನಾಡಿದರು.

ಹಾಲಿ ವರ್ಷದಲ್ಲಿ ಅಗಲಿದ ಸಂಸ್ಥೆಯ ಸದಸ್ಯರು ಹಾಗೂ ಕಲಾವಿದರಿಗೆ ಕಾರ್ಯದರ್ಶಿ ಮುರಲಿ ಕಡೆಕಾರ್ ನುಡಿನಮನ ಸಲ್ಲಿಸಿದರು. ಮಹಾಸಭೆಯು ಡಾ. ರಾಜೇಶ್ ನಾವಡರ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಉಪಾಧ್ಯಕ್ಷರಾದ ಎಸ್. ವಿ. ಭಟ್ ಸ್ವಾಗತಿಸಿದರು. ಉಪಾಧ್ಯಕ್ಷರಾದ ಪಿ. ಕಿಶನ್ ಹೆಗ್ಡೆ, ವಿ.ಜಿ. ಶೆಟ್ಟಿ ಉಪಸ್ಥಿತರಿದ್ದರು. ಎಚ್.ಎನ್. ವೆಂಕಟೇಶ್ ವಂದಿಸಿದರು.