ಸಾರಾಂಶ
ತಾಲೂಕಿನ ಮಾಗೋಡ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕಾರ್ತಿಕೋತ್ಸವದ ಪ್ರಯುಕ್ತ ಯಕ್ಷಗಾನ ಪ್ರದರ್ಶನ ನಡೆಯಿತು.
ಕನ್ನಡಪ್ರಭ ವಾರ್ತೆ ಯಲ್ಲಾಪುರ
ತಾಲೂಕಿನ ಮಾಗೋಡ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕಾರ್ತಿಕೋತ್ಸವದ ಪ್ರಯುಕ್ತ ಯಕ್ಷಗಾನ ಪ್ರದರ್ಶನ ನಡೆಯಿತು.ಇದಕ್ಕೂ ಮುನ್ನ ನಡೆದ ಸಭಾ ಕಾರ್ಯಕ್ರಮದಲ್ಲಿ ಹಿರಿಯ ಮದ್ದಲೆವಾದಕ ಶಂಕರ ಭಾಗ್ವತ ಅವರನ್ನು ಸನ್ಮಾನಿಸಲಾಯಿತು. ಶಿವರಾಮ ಭಾಗ್ವತ ಮಣ್ಕುಳಿ ಅಭಿನಂದನಾ ನುಡಿಗಳನ್ನಾಡಿದರು.
ಹಿರಿಯ ವೈದಿಕರಾದ ರಾಮಕೃಷ್ಣ ಭಟ್ಟ, ಗಣಪತಿ ಭಟ್ಟ, ನಾರಾಯಣ ಭಟ್ಟ ಮೊಟ್ಟೆಗದ್ದೆ, ಆನಗೋಡ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎನ್.ಕೆ. ಭಟ್ಟ ಅಗ್ಗಾಶಿಕುಂಬ್ರಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಆರ್.ಎಸ್. ಭಟ್ಟ, ವಿಶ್ವದರ್ಶನ ಶಿಕ್ಷಣ ಸಮೂಹದ ಅಧ್ಯಕ್ಷ ಹರಿಪ್ರಕಾಶ ಕೋಣೆಮನೆ, ಎಲ್.ಎಸ್.ಎಂ.ಪಿ. ಸೊಸೈಟಿ ಅಧ್ಯಕ್ಷ ನಾಗರಾಜ ಕವಡಿಕೆರೆ, ಉಪಾಧ್ಯಕ್ಷ ಟಿ.ಆರ್. ಹೆಗಡೆ, ನಿರ್ದೇಶಕ ಎಂ.ಎನ್. ಭಟ್ಟ, ದೇವಸ್ಥಾನದ ಆಡಳಿತ ಮಂಡಳಿಯ ಗೋಪಾಲಕೃಷ್ಣ ಭಟ್ಟ, ಟಿಎಂಎಸ್ ಮಾಜಿ ನಿರ್ದೇಶಕ ವೆಂಕಟರಮಣ ಭಟ್ಟ ಕಿರಕುಂಭತ್ತಿ ಹಾಗೂ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.ವೇದಾ ಭಟ್ಟ ಪ್ರಾರ್ಥಿಸಿದರು. ಎನ್.ಎಸ್. ಭಟ್ಟ ಸ್ವಾಗತಿಸಿದರು. ನರಸಿಂಹ ಭಟ್ಟ ಕುಂಕಿಮನೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಂಜುನಾಥ ಜೋಶಿ ನಿರ್ವಹಿಸಿ, ವಂದಿಸಿದರು.
ಪ್ರಸಿದ್ಧ ಕಲಾವಿದರಿಂದ ಪ್ರದರ್ಶನಗೊಂಡ ಚಂದ್ರಹಾಸ ಚರಿತ್ರೆ ಹಾಗೂ ಬಭ್ರುವಾಹನ ಯಕ್ಷಗಾನ ಪ್ರೇಕ್ಷಕರ ಮೆಚ್ವುಗೆ ಗಳಿಸಿತು.ಹಿಮ್ಮೇಳದಲ್ಲಿ ಭಾಗವತರಾಗಿ ಕೇಶವ ಹೆಗಡೆ ಕೊಳಗಿ, ಅನಂತ ಹೆಗಡೆ ದಂತಳಿಗೆ, ಶಶಾಂಕ ಬೋಡೆ, ಮಂಜುನಾಥ ಭಟ್ಟ ದೇವದಮನೆ, ಮದ್ದಲೆವಾದಕರಾಗಿ ಶಂಕರ ಭಾಗ್ವತ ಯಲ್ಲಾಪುರ, ಅನಿರುದ್ಧ ಹೆಗಡೆ ವರ್ಗಾಸರ, ಚಂಡೆವಾದಕರಾಗಿ ಪ್ರಶಾಂತ ಹೆಗಡೆ ಕೈಗಡಿ ಭಾಗವಹಿಸಿದ್ದರು.
ಗಣಪತಿ ಹೆಗಡೆ ತೋಟಿಮನೆ, ಈಶ್ವರ ನಾಯ್ಕ ಮಂಕಿ, ಸದಾಶಿವ ಮಲವಳ್ಳಿ, ಉದಯ ಹೆಗಡೆ ಕಡಬಾಳ, ನಾಗೇಂದ್ರ ಭಟ್ಟ ಮೂರೂರು, ನಾಗರಾಜ ಭಟ್ಟ ಕುಂಕಿಪಾಲ, ಸನ್ಮಯ ಭಟ್ಟ ಮಲವಳ್ಳಿ, ಮಂಜುನಾಥ ಹೆಗಡೆ ಹಿಲ್ಲೂರು, ದೀಪಕ ಭಟ್ಟ ಕುಂಕಿ, ಶ್ರೀಧರ ಅಣಲಗಾರ, ಆದರ್ಶ ಭಟ್ಟ ಈರಾಪುರ, ವೆಂಕಟ್ರಮಣ ಭಟ್ಟ ಕವಡಿಕೆರೆ ಪಾತ್ರ ನಿರ್ವಹಿಸಿದರು.;Resize=(128,128))
;Resize=(128,128))
;Resize=(128,128))