ಸಾರಾಂಶ
ಸಿದ್ದಾಪುರ: ಸಾಧಕರ ಮನೆಗೆ ಸಾಹಿತ್ಯ ಪರಿಷತ್ತು ಕಾರ್ಯಕ್ರಮದ ಅಡಿಯಲ್ಲಿ ಈ ವರ್ಷದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಭಾಗವತ ಕೇಶವ ಹೆಗಡೆ ಕೊಳಗಿಯವರ ಮನೆಗೆ ತೆರಳಿದ ಸಾಹಿತ್ಯ ಪರಿತ್ತಿನ ಅಧ್ಯಕ್ಷರು, ಪದಾಧಿಕಾರಿಗಳು, ಯಕ್ಷಪ್ರಿಯರು ಅವರ ಮನೆಯಲ್ಲಿ ಶಾಲು ಹೊದಿಸಿ ಫಲತಾಂಬೂಲ ನೀಡಿ ದಂಪತಿಗಳನ್ನು ಅಭಿನಂದಿಸಿದರು.ಈ ಸಂದರ್ಭದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಗೋಪಾಲ ನಾಯ್ಕ ಭಾಶಿ ಅಭಿನಂದಿಸಿ ಮಾತನಾಡಿ, ಕನ್ನಡವನ್ನು ಶೇಕಡಾ ನೂರಕ್ಕೆ ನೂರರಷ್ಟು ಇಂದಿಗೂ ಉಳಿಸಿ ಬೆಳೆಸಿಕೊಂಡು ಬಂದ ಏಕೈಕ ಕಲೆಯೆಂದರೆ ಯಕ್ಷಗಾನ ಮಾತ್ರ. ಇದನ್ನು ಭಾಗವತರಾದ ಕೇಶವ ಹೆಗಡೆ ಕೊಳಗಿಯವರು ಒಪ್ಪಿಕೊಂಡು, ಅಪ್ಪಿಕೊಂಡು ಸಾಧನೆಗೈದಿದ್ದಾರೆ ಎಂದರು.
ಪ್ರಾಂಶುಪಾಲ ಎಂ.ಕೆ. ನಾಯ್ಕ ಹೊಸಳ್ಳಿ, ಸಾಹಿತಿ ಜಿ.ಜಿ. ಹೆಗಡೆ ಬಾಳಗೋಡ, ಉಪನ್ಯಾಸಕ ರತ್ನಾಕರ ನಾಯ್ಕ, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಗಂಗಾಧರ ಕೊಳಗಿ ಮುಂತಾದವರು ಅಭಿನಂದನಾ ನುಡಿಗಳನ್ನು ಆಡಿದರು.ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕೋಶಾಧ್ಯಕ್ಷ ಪಿ.ಬಿ. ಹೊಸೂರು, ಕಾರ್ಯದರ್ಶಿಗಳಾದ ಅಣ್ಣಪ್ಪ ನಾಯ್ಕ ಶಿರಳಗಿ, ಪ್ರಶಾಂತ ಶೇಟ್ ಹಾಳದಕಟ್ಟ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಗೌಡರ, ಸಾಹಿತ್ಯ ಪರಿಷತ್ತಿನ ಸದಸ್ಯರಾದ ಚಂದ್ರಶೇಖರ ಕುಂಬ್ರಿಗದ್ದೆ, ಪ್ರಶಾಂತ ಹೆಗಡೆ ಕಾಶಿಗದ್ದೆ, ರತ್ನಾಕರ ಪಾಲೇಕರ ಸುಧಾರಾಣಿ ನಾಯ್ಕ, ಸುಜಾತ ಹೆಗಡೆ ದಂಟಕಲ್ ಶುಭ ಕೋರಿದರು. ಅಣ್ಣಪ್ಪ ಶಿರಳಗಿ ಸ್ವಾಗತಿಸಿದರು. ಪದಾಧಿಕಾರಿ ಚಂದ್ರಶೇಖರ ಕುಂಬ್ರಿಗದ್ದೆ ವಂದಿಸಿದರು.ಕನ್ನಡಕ್ಕಿದೆ ಭವ್ಯ ಸಾಹಿತ್ಯ ಪರಂಪರೆ
ಯಲ್ಲಾಪುರ: ಕನ್ನಡ ಭವ್ಯವಾದ ಸಾಹಿತ್ಯ ಪರಂಪರೆಯನ್ನು ಹೊಂದಿದ್ದು, ಅದನ್ನು ಅರಿತು, ಕನ್ನಡ ಪ್ರೀತಿ ಬೆಳೆಸಿಕೊಳ್ಳುವತ್ತ ಯುವಜನಾಂಗ ಚಿಂತನೆ ಮಾಡಬೇಕು ಎಂದು ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಮುಕ್ತಾ ಶಂಕರ ತಿಳಿಸಿದರು.ನ. ೭ರಂದು ಸ.ಪ್ರ.ದ. ಕಾಲೇಜಿನಲ್ಲಿ ಕಸಾಪ ಯಲ್ಲಾಪುರ, ಸರ್ಕಾರಿ ಪದವಿ ಕಾಲೇಜಿನ ಕನ್ನಡ ವಿಭಾಗ ಹಮ್ಮಿಕೊಂಡ ಕನ್ನಡ ಕಾರ್ತಿಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಂಪರೆ ಕುರಿತು ಉಪನ್ಯಾಸ ನೀಡಿದ ಅವರು, ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿದ ಕನ್ನಡದ ಸಾಹಿತ್ಯ ಪರಂಪರೆ ಶ್ರೀಮಂತವಾದುದು ಎಂದರು.ಕಾರ್ಯಕ್ರಮ ಉದ್ಘಾಟಿಸಿದ ಪ್ರಾಂಶುಪಾಲ ಡಾ. ಜನಾರ್ದನ ಆರ್.ಡಿ. ಮಾತನಾಡಿ, ಭಾಷೆ ಮತ್ತು ಸಾಹಿತ್ಯ ಒಂದಕ್ಕೊಂದು ಅವಿನಾಭಾವ ಸಂಬಂಧಿಸಿದೆ. ಸಾಹಿತ್ಯ ಪ್ರಾಕಾರದ ಕೃಷಿಗೆ ಭಾಷೆ ಮೂಲ ವಸ್ತುವಾಗಿದೆ. ಸಾಹಿತ್ಯ ಕಾಲಘಟ್ಟದ ಜೀವನದ ಅನುಭವಗಳನ್ನು ನೀಡುತ್ತದೆ ಎಂದರು.ಪತ್ರಕರ್ತ ಶ್ರೀಧರ ಅಣಲಗಾರ ಮಾತನಾಡಿ, ಕನ್ನಡವನ್ನು ಸರಿಯಾಗಿ ಬಳಸಿದಾಗ ಮಾತ್ರ ಉಳಿಸಲು, ಬೆಳೆಸಲು ಸಾಧ್ಯ ಎಂದರು.ಅಧ್ಯಕ್ಷತೆ ವಹಿಸಿದ್ದ ತಾಲೂಕು ಕಸಾಪ ಅಧ್ಯಕ್ಷ ವಿ. ಸುಬ್ರಹ್ಮಣ್ಯ ಭಟ್ಟ ಮಾತನಾಡಿ, ಮನೆಯಲ್ಲಿ ಮಾತೃಭಾಷೆ ಮಾತನಾಡಬೇಕು. ಉಳಿದೆಡೆ ಕನ್ನಡವನ್ನೇ ಮಾತನಾಡಬೇಕು. ಕನ್ನಡದ ಬಗ್ಗೆ ಪ್ರೀತಿ ಬೆಳೆಸಿಕೊಳ್ಳಬೇಕು ಎಂದರು.ಉಪನ್ಯಾಸಕರಾದ ಶರತ್ ಕುಮಾರ, ಸುರೇಖಾ ತಡವಲ ವೇದಿಕೆಯಲ್ಲಿದ್ದರು. ಉಪನ್ಯಾಸಕಿ ಸವಿತಾ ನಾಯಕ ಸ್ವಾಗತಿಸಿದರು. ವಿದ್ಯಾರ್ಥಿನಿಗಳಾದ ವೇದಾ ಭಟ್ಟ ಪ್ರಾರ್ಥಿಸಿದರು. ಕಾವ್ಯಶ್ರೀ ಮರಾಠಿ ನಿರ್ವಹಿಸಿದರು. ಆಶಾ ನಾಯ್ಕ ವಂದಿಸಿದರು.