ಸಾರಾಂಶ
ಸವದತ್ತಿ: ಸುಕ್ಷೇತ್ರ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕಕ್ಕೆ ರಾಜ್ಯಪಾಲರು ಸಹಿ ಹಾಕಿರುವುದು ದೇವಸ್ಥಾನದ ಅಭಿವೃದ್ಧಿಗೆ ನಾಂದಿಯಾಗಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹರ್ಷ ವ್ಯಕ್ತಪಡಿಸಿದ್ದಾರೆ.
ಸವದತ್ತಿ: ಸುಕ್ಷೇತ್ರ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕಕ್ಕೆ ರಾಜ್ಯಪಾಲರು ಸಹಿ ಹಾಕಿರುವುದು ದೇವಸ್ಥಾನದ ಅಭಿವೃದ್ಧಿಗೆ ನಾಂದಿಯಾಗಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹರ್ಷ ವ್ಯಕ್ತಪಡಿಸಿದ್ದಾರೆ.
ಯಲ್ಲಮ್ಮ ದೇವಸ್ಥಾನ ಮಾದರಿಯಾಗಿ ಮಾಡುವಲ್ಲಿ ಹಲವಾರು ಕನಸು ಕಟ್ಟಿಕೊಂಡಿದ್ದ ನಮಗೆ ಇದೊಂದು ಮೈಲುಗಲ್ಲಾಗಿದ್ದು, ನಿರಂತರ ಪ್ರಯತ್ನಕ್ಕೆ ಕೊನೆಗೂ ಫಲ ಸಿಕ್ಕಿದೆ ಎಂದು ಹೇಳಿದ್ದಾರೆ.ಈ ಹಿಂದೆ ವಿಧಾನ ಮಂಡಲದಲ್ಲಿ ಅನುಮೋದನೆ ಪಡೆದು, ರಾಜ್ಯಪಾಲರ ಅಂಕಿತಕ್ಕೆ ಹೋಗಿದ್ದ ಸವದತ್ತಿ ಯಲ್ಲಮ್ಮ ಅಭಿವೃದ್ಧಿ ಪ್ರಾಧಿಕಾರದ ವಿಧೇಯಕಕ್ಕೆ ರಾಜ್ಯಪಾಲರು ಸಹಿ ಮಾಡದೆ ಸರ್ಕಾರಕ್ಕೆ ಕೆಲವು ಸ್ಪಷ್ಟನೆ ಕೇಳಿ ವಿಧೇಯಕ ವಾಪಾಸ್ ಕಳಿಸಿದ್ದರು. ಸರ್ಕಾರದಿಂದ ಹೆಚ್ಚಿನ ಮಾಹಿತಿ ಒದಗಿಸಿದ ಬಳಿಕ ರಾಜ್ಯಪಾಲರು ಯಲ್ಲಮ್ಮ ದೇವಿ ಅಭಿವೃದ್ಧಿ ಪ್ರಾಧಿಕಾರಕ್ಕೆ ವಿಧೇಯಕಕ್ಕೆ ಸಹಿ ಹಾಕಿದ್ದು, ದೇವಸ್ಥಾನ ಅಭಿವೃದ್ಧಿಗೆ ಗ್ರೀನ್ ಸಿಗ್ನಲ್ ಸಿಕ್ಕಂತಾಗಿದೆ.ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ನಿರಂತರ ಪ್ರಯತ್ನ ಪ್ರಾಧಿಕಾರ ರಚನೆಗೆ ಪ್ರಮುಖ ಕಾರಣವಾಗಿದೆ ಎಂದು ತಿಳಿಸಿದ್ದಾರೆ.