ಕೊಂಡ್ಲಿ ಗ್ರಾಮ ಪಂಚಾಯಿತಿಗೆ ಯಶೋಧಮ್ಮ ಅಧ್ಯಕ್ಷೆ

| Published : May 10 2025, 01:08 AM IST

ಸಾರಾಂಶ

ತಾಲೂಕಿನ ಕೊಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಯಶೋಧಮ್ಮ ಹಾಗೂ ಉಪಾಧ್ಯಕ್ಷರಾಗಿ ಸೋಮಶೇಖರಯ್ಯ ಅವಿರೋಧವಾಗಿ ಆಯ್ಕೆಯಾದರು.

ಕನ್ನಡಪ್ರಭ ವಾರ್ತೆ ಗುಬ್ಬಿ

ತಾಲೂಕಿನ ಕೊಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಯಶೋಧಮ್ಮ ಹಾಗೂ ಉಪಾಧ್ಯಕ್ಷರಾಗಿ ಸೋಮಶೇಖರಯ್ಯ ಅವಿರೋಧವಾಗಿ ಆಯ್ಕೆಯಾದರು.

ಅಧ್ಯಕ್ಷೆ ಯಶೋಧಮ್ಮ ಮಾತನಾಡಿ ಸರ್ವ ಸದಸ್ಯರ ಸಹಕಾರದಿಂದ ಅವಿರೋಧವಾಗಿ ಆಯ್ಕೆಯಾಗಿದ್ದೇನೆ. ಬಿಜೆಪಿ‌ ಮುಖಂಡ ಎಸ್.ಡಿ.ದಲೀಪ್ ಕುಮಾರ್ ಅವರ ಆರ್ಶಿವಾದದಿಂದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನವನ್ನು ಒಂದೇ ಸಮುದಾಯದ ಗೊಲ್ಲ ಜನಾಂಗಕ್ಕೆ ನೀಡಿದ್ದಾರೆ. ಎಲ್ಲಾ ಸದಸ್ಯರ ಸಹಕಾರದೊಂದಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಿಗೆ ಕುಡಿಯುವ ನೀರು, ಚರಂಡಿ ಸ್ವಚ್ಛತೆ, ರಸ್ತೆ ನಿರ್ಮಾಣ, ಬೀದಿದೀಪ ಸೇರಿದಂತೆ ಗ್ರಾಮ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತೇನೆ. ಬೇಸಿಗೆ ಇರುವುದರಿಂದ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಲಾಗುವುದು. ಮನರೇಗಾ ಕಾಮಗಾರಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಮೂಲಕ ತಾಲ್ಲೂಕಿನಲ್ಲಿ ಮಾದರಿ ಗ್ರಾಮ ಪಂಚಾಯಿತಿಯನ್ನಾಗಿ ಮಾಡುತ್ತೇನೆ ಎಂದರು‌. ನೂತನ ಉಪಾಧ್ಯಕ್ಷ ಸೋಮಶೇಖರಯ್ಯ ಮಾತನಾಡಿ, ಜೆಜೆಎಂ ಕಾಮಗಾರಿ ಅಪೂರ್ಣವಾಗಿದ್ದು ಗುತ್ತಿಗೆದಾರರು ಕಳಪೆ ಕಾಮಗಾರಿ ಮಾಡಿದ್ದಾರೆ. ಈ ಸಂಬಂಧ ಕಾನೂನು ವ್ಯಾಪ್ತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಗ್ರಾಪಂ ವ್ಯಾಪ್ತಿಯಲ್ಲಿ ಇರುವ ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು ಎಂದರು. ಚುನಾವಣಾ ಅಧಿಕಾರಿಯಾಗಿ ಇಒಶಿವಪ್ರಕಾಶ್ ಕಾರ್ಯ ನಿರ್ವಹಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಕೆ ಟಿ ಸೋಮೇಗೌಡ, ಲೋಕೇಶ್ ಕೆ ಎನ್, ಭಾಗ್ಯ, ಮೀನಾಕ್ಷಿ, ದೀಲಿಪ್ ಕುಮಾರ್, ನಿಂಗಯ್ಯ, ಲಕ್ಷ್ಮೀದೇವಮ್ಮ, ಜ್ಞಾನಾಂಬಿಕ, ಶ್ರೀಪತಿ, ರತ್ನಮ್ಮ ಬಸವರಾಜು, ಲೋಕೇಶ್, ಕೆ ಆರ್ ವೀಣಾ, ಮುಖಂಡರಾದ ಕಾರೇಕುರ್ಚಿ ಸತೀಶ್, ಸುಧಾಕರ್, ತಮ್ಮೇಗೌಡ, ವೆಂಕಟೇಶ್, ಯೋಗೇಶ್, ಸದಾಶಿವು, ಸೀಗಯ್ಯ ಮಂಜುನಾಥ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.