ಉಡುಪಿ: ನಗರಸಭಾ ವ್ಯಾಪ್ತಿಯ ಇಂದ್ರಾಳಿ ವಾರ್ಡಿನ ಮಂಚಿ ಕುಮೇರಿ ಹಾಗೂ ಬನ್ನಂಜೆ ವಾರ್ಡಿನ ಮೀನು ಮಾರುಕಟ್ಟೆ ಬಳಿಯ 2 ನೂತನ ಅಂಗನವಾಡಿ ಕೇಂದ್ರದ ಕಾಮಗಾರಿಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಶಿಲಾನ್ಯಾಸ ನೆರವೇರಿಸಿದರು. ನಂತರ ಮಾತನಾಡಿದ ಅವರು, ಶೈಕ್ಷಣಿಕ ಜೀವನಕ್ಕೆ ಅಡಿಪಾಯವಾಗಿರುವ ಅಂಗನವಾಡಿ ಕೇಂದ್ರಗಳು ಪುಟಾಣಿ ಮಕ್ಕಳಿಗೆ ಶಿಕ್ಷಣದ ಜೊತೆಗೆ ಪೌಷ್ಟಿಕ ಆಹಾರದ ವ್ಯವಸ್ಥೆ ಕಲ್ಪಿಸುವ ಮೂಲಕ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ವಿಶೇಷ ಕೊಡುಗೆ ನೀಡುತ್ತಿದೆ. ಹಲವು ವರ್ಷಗಳ ಬೇಡಿಕೆಯಾಗಿದ್ದ ಆದಿ ಉಡುಪಿ ಹಾಗೂ ಮಂಚಿ ಕುಮೇರಿ ಅಂಗನವಾಡಿ ಕೇಂದ್ರದ ನಿರ್ಮಾಣಕ್ಕೆ ತಲಾ 20 ಲಕ್ಷ ರು. ಅನುದಾನ ಬಿಡುಗಡೆಯಾಗಿದ್ದು ಶೀಘ್ರದಲ್ಲೇ ಕಾಮಗಾರಿ ಪೂರ್ಣಗೊಂಡು ಸ್ಥಳೀಯ ಪುಟಾಣಿಗಳ ಶಿಕ್ಷಣಕ್ಕೆ ಲೋಕಾರ್ಪಣೆಗೊಳ್ಳಲಿದೆ ಎಂದರು.ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಮಾಜಿ ನಗರಸಭಾ ಸದಸ್ಯರಾದ ಅಶೋಕ್ ನಾಯ್ಕ್, ಕಲ್ಪನಾ ಸುಧಾಮ, ಹರೀಶ್ ರಾಮ್, ಸವಿತಾ ಹರೀಶ್ ರಾಮ್, ರಮೇಶ್, ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್, ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ, ಸ್ಥಳೀಯ ಮುಖಂಡರು, ಇಲಾಖೆಯ ಅಧಿಕಾರಿಗಳು, ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.
ಅಂಗನವಾಡಿ ಕಟ್ಟಡ ಕಾಮಗಾರಿಗೆ ಯಶ್‌ಪಾಲ್ ಶಿಲಾನ್ಯಾಸ
ನಗರಸಭಾ ವ್ಯಾಪ್ತಿಯ ಇಂದ್ರಾಳಿ ವಾರ್ಡಿನ ಮಂಚಿ ಕುಮೇರಿ ಹಾಗೂ ಬನ್ನಂಜೆ ವಾರ್ಡಿನ ಮೀನು ಮಾರುಕಟ್ಟೆ ಬಳಿಯ 2 ನೂತನ ಅಂಗನವಾಡಿ ಕೇಂದ್ರದ ಕಾಮಗಾರಿಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಶಿಲಾನ್ಯಾಸ ನೆರವೇರಿಸಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.