ಉಡುಪಿ: ಇಲ್ಲಿನ ತೆಂಕನಿಡಿಯೂರು ಗ್ರಾಮದಲ್ಲಿ 58.50 ಲಕ್ಷ ರು. ವೆಚ್ಚದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿದರು.
ಉಡುಪಿ: ಇಲ್ಲಿನ ತೆಂಕನಿಡಿಯೂರು ಗ್ರಾಮದಲ್ಲಿ 58.50 ಲಕ್ಷ ರು. ವೆಚ್ಚದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಶಾಸಕರು, ತೆಂಕನಿಡಿಯೂರು ಗ್ರಾಮದ ಜನತೆಯ ಬಹು ದಿನದ ಬೇಡಿಕೆಯಾಗಿದ್ದ ಬೈಲಕರೆ ನಾಗಬನ ರಸ್ತೆ ಅಭಿವೃದ್ಧಿಗೆ 20 ಲಕ್ಷ ರು., ಕೆಳಾರ್ಕಳಬೆಟ್ಟು ಭೋಜರಾಜ ಕಾಂಪೌಂಡ್ ಕೊಜಕುಳಿ ಒಳರಸ್ತೆ ಅಭಿವೃದ್ಧಿಗೆ 15 ಲಕ್ಷ ರು., ಅಂಬಿಕಾ ವೈಟ್ ರಸ್ತೆ ಹಾಗೂ ಲಕ್ಷ್ಮೀನಗರ 9ನೇ ಕ್ರಾಸ್ ರಸ್ತೆ ಅಭಿವೃದ್ಧಿಗೆ 15 ಲಕ್ಷ ರು. ಅನುದಾನ ಒದಗಿಸಿ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಪ್ರಗತಿ ಲೇಔಟ್ ನಲ್ಲಿ 8.50 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆಯ ಉದ್ಘಾಟನೆ ನಡೆಸಲಾಗಿದೆ. ಮುಂದಿನ ದಿನಗಳಲ್ಲೂ ಗ್ರಾಮದ ಮೂಲ ಸೌಕರ್ಯ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುವುದಾಗಿ ಹೇಳಿದರು.\
ಸ್ಥಳೀಯ ಮುಖಂಡರಾದ ಶರತ್ ಬೈಲಕೆರೆ, ವಿಜಯ ಪ್ರಕಾಶ್, ವಿನೋದ್ ಸುವರ್ಣ, ಚರಣ್ ರಾಜ್, ಅರುಣ್ ಜತ್ತನ್, ಸತೀಶ್ ಬೈಲಕೆರೆ, ಕೃಷ್ಣ ಶೆಟ್ಟಿ, ಗಾಯತ್ರಿ, ಮಾಲಿನಿ ಜತ್ತನ್, ಶಾಲಿನಿ, ಪುಷ್ಪ, ಪ್ರಶಾಂತ್ ಹೆಬ್ಬಾರ್, ರೇಖಾ, ಗೀತಾ ಶೆಟ್ಟಿ, ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.