ಗೋಕಾಕ: ಬಿಜೆಪಿ ಪಕ್ಷದ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಾಗೂ ಮಾಜಿ ಶಾಸಕ ಕುಮಾರ ಬಂಗಾರಪ್ಪ ಇಬ್ಬರು ಗೋಕಾಕದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಭೇಟಿಯಾದರು.
ಗೋಕಾಕ: ಬಿಜೆಪಿ ಪಕ್ಷದ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಾಗೂ ಮಾಜಿ ಶಾಸಕ ಕುಮಾರ ಬಂಗಾರಪ್ಪ ಇಬ್ಬರು ಗೋಕಾಕದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಭೇಟಿಯಾದರು.
ಮಾಜಿ ಶಾಸಕ ಕುಮಾರ ಬಂಗಾರಪ್ಪ ಹಾಗೂ ಬಸನಗೌಡ ಪಾಟೀಲ ಯತ್ನಾಳ ಅವರು ತಾಲೂಕಿನ ಅಂಕಲಗಿ ಪಟ್ಟಣಕ್ಕೆ ತೆರಳಿದ್ದರು. ನಂತರ ಗೋಕಾಕನ ಶಾಸಕ ರಮೇಶ ಜಾರಕಿಹೊಳಿ ಅವರ ಕಚೇರಿಗೆ ಭೇಟಿದ್ದರು. ಈ ವೇಳೆ ಅವರನ್ನು ಶಾಸಕ ರಮೇಶ ಜಾರಕಿಹೊಳಿ, ಡಿಸಿಸಿ ಬ್ಯಾಂಕ ನಿರ್ದೇಶಕ ಅಮರನಾಥ ಜಾರಕಿಹೊಳಿ ಸತ್ಕರಿಸಿದರು. ಶಾಸಕ ರಮೇಶ ಜಾರಕಿಹೊಳಿ ಅವರೊಂದಿಗೆ ಇಬ್ಬರು ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ರಾಜ್ಯ ರಾಜಕೀಯದ ಬಗ್ಗೆ ಚರ್ಚೆ ನಡೆಸಿದ್ದು, ನಂತರ ಒಂದೇ ವಾಹನದಲ್ಲಿ ಗೋಕಾಕನಿಂದ ಮೂವರು ಅಥಣಿಗೆ ತೆರಳಿರುವ ಮಾಹಿತಿ ಲಭ್ಯವಾಗಿದೆ.