ಬಸನಗೌಡ ಪಾಟೀಲ ಯತ್ನಾಳ, ರಮೇಶ ಜಾರಕಿಹೊಳಿ,ಸಿದ್ದೇಶ್ವರ ಗೌಪ್ಯ ಸಭೆ ಮಾಡಿಲ್ಲ: ಅರವಿಂದ ಬೆಲ್ಲದ

| Published : Aug 13 2024, 01:01 AM IST / Updated: Aug 13 2024, 11:12 AM IST

Aravind Bellad
ಬಸನಗೌಡ ಪಾಟೀಲ ಯತ್ನಾಳ, ರಮೇಶ ಜಾರಕಿಹೊಳಿ,ಸಿದ್ದೇಶ್ವರ ಗೌಪ್ಯ ಸಭೆ ಮಾಡಿಲ್ಲ: ಅರವಿಂದ ಬೆಲ್ಲದ
Share this Article
  • FB
  • TW
  • Linkdin
  • Email

ಸಾರಾಂಶ

ಕಾಂಗ್ರೆಸ್‌ನಲ್ಲೂ ಒಂದು ರೀತಿಯ ಅಸಮಾಧಾನ ಇದ್ದೇ ಇದೆ. ಒಂದೊಂದು ದಿನ ಒಬ್ಬೊಬ್ಬರು ಮುಖ್ಯಮಂತ್ರಿ ಆಗಬೇಕು ಎನ್ನುತ್ತಿದ್ದಾರೆ. ಇದು ಎಲ್ಲ ಪಕ್ಷಗಳಲ್ಲಿ ಇರುವ ಸಾಮಾನ್ಯ ಸಂಗತಿ ಎಂದ ಬೆಲ್ಲದ.

ಧಾರವಾಡ:  ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ರಮೇಶ ಜಾರಕಿಹೊಳಿ ಹಾಗೂ ಮಾಜಿ ಸಂಸದ ಸಿದ್ದೇಶ್ವರ ಅವರು ಗೌಪ್ಯವಾಗಿ ಅಲ್ಲ ಬಹಿರಂಗವಾಗಿಯೇ ಸಭೆ ಮಾಡಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದೊಳಗೆ ಕುಳಿತು ಎಲ್ಲರೂ ಮಾತನಾಡುವ ಅವಶ್ಯಕತೆ ಇದೆ. ಅದನ್ನು ಮಾಧ್ಯಮಗಳ ಮುಂದೆ ಮಾತನಾಡುವುದು ಸರಿಯಲ್ಲ. ರಾಷ್ಟ್ರೀಯ ಪಕ್ಷದಲ್ಲಿ ಬೇರೆ ಬೇರೆ ವಿಚಾರಗಳು ಇರುತ್ತವೆ. ಪಕ್ಷದ ಕುರಿತಾಗಿ ಅವರು ಹೇಳುವ ಕೆಲ ವಿಚಾರಗಳು ಸರಿಯಾಗಿದ್ದು, ಅವುಗಳನ್ನು ಪಕ್ಷದೊಳಗೆ ಚರ್ಚೆ ಮಾಡಲಿದ್ದೇವೆ. ಈ ವಿಚಾರಗಳ ಬಗ್ಗೆ ಪಕ್ಷದ ಚೌಕಟ್ಟಿನಲ್ಲಿ ಮಾತನಾಡುತ್ತೇವೆ. ಬಿಜೆಪಿಯಲ್ಲಿ ಯಾವುದೇ ಭಿನ್ನಮತ ಇಲ್ಲ ಎಂದರು.

ಕಾಂಗ್ರೆಸ್‌ನಲ್ಲೂ ಒಂದು ರೀತಿಯ ಅಸಮಾಧಾನ ಇದ್ದೇ ಇದೆ. ಒಂದೊಂದು ದಿನ ಒಬ್ಬೊಬ್ಬರು ಮುಖ್ಯಮಂತ್ರಿ ಆಗಬೇಕು ಎನ್ನುತ್ತಿದ್ದಾರೆ. ಇದು ಎಲ್ಲ ಪಕ್ಷಗಳಲ್ಲಿ ಇರುವ ಸಾಮಾನ್ಯ ಸಂಗತಿ ಎಂದ ಬೆಲ್ಲದ, ಈ ಹಿಂದೆ ಹಂಸರಾಜ್‌ ಭಾರದ್ವಾಜ್‌ ಅವರು ರಾಜ್ಯಪಾಲರಿದ್ದಾಗ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದರು. ಆಗ ಭಾರದ್ವಾಜ್‌ ಅವರು ಸ್ಪಷ್ಟನೆ ಕೇಳದೇ ಕ್ರಮಕ್ಕೆ ಮುಂದಾಗಿದ್ದರು. ಆದರೆ, ಈಗಿನ ರಾಜ್ಯಪಾಲರು ಸಿದ್ದರಾಮಯ್ಯನವರಿಗೆ ಸ್ಪಷ್ಟನೆಗೆ ಅವಕಾಶ ಕೊಟ್ಟಿದ್ದಾರೆ. ಅವರ ಸ್ಪಷ್ಟನೆ ಸಮರ್ಪಕವಾಗಿದ್ದರೆ ಯಾವುದೇ ಪ್ರಶ್ನೆ ಉದ್ಭವಿಸುವುದಿಲ್ಲ. ಆದರೆ, ಅಸಮರ್ಪಕ ಇದ್ದಾಗ ಮಾತ್ರ ಮುಂದಿನ ಕ್ರಮ ಆಗುತ್ತದೆ ಎಂದು ಮುಖ್ಯಮಂತ್ರಿಗಳಿಗೆ ರಾಜ್ಯಪಾಲರು ನೀಡಿದ ನೋಟಿಸ್‌ ವಿಚಾರದ ಕುರಿತು ಪ್ರಶ್ನೆಯೊಂದಕ್ಕೆ ಪ್ರಸ್ತಾಪಿಸಿದರು.