ಕನ್ನಡಪ್ರಭ ವಾರ್ತೆ ಬಾಗಲಕೋಟೆ

ದಸರಾ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಮನೆಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹಾಗೂ ಮಾಜಿ ಸಚಿವ ಮುರುಗೇಶ ನಿರಾಣಿ ಅವರು ಭೇಟಿ ನೀಡಿದರು. ಈ ವೇಳೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಮತ್ತು ಮಾಜಿ ಸಚಿವ ಮುರುಗೇಶ ನಿರಾಣಿ ಮುಖಾಮುಖಿ ಭೇಟಿಯಾಗಿ ಕೆಲಕಾಲ ಚರ್ಚಿಸಿದರು, ನಂತರ ಪ್ರಸಾದ ಸ್ವೀಕರಿಸಿದ ಬಳಿಕ ಭಾಂಡಗೆ ಅಕ್ಕಪಕ್ಕ ಕೂತು ಮಾತನಾಡಿದ ಯತ್ನಾಳ ಮತ್ತು ನಿರಾಣಿ ಅವರು 1 ಗಂಟೆಗೂ ಅಧಿಕ ಕಾಲ ಭಾಂಡಗೆ ಅವರ ಮನೆಯಲ್ಲಿದ್ದರು.