ಕನ್ನಡಪ್ರಭ ವಾರ್ತೆ ಉಡುಪಿರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು ಜನರ ಬದುಕಿನಲ್ಲಿ ಬದಲಾವಣೆ ತರುವ ಮೂಲಕ ಯಶಸ್ವಿಯಾಗಿ ಎರಡು ವರ್ಷ ಪೂರೈಸಿದ ಸಂಭ್ರಮವನ್ನು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಅಜ್ಜರಕಾಡು ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿರುವ ಬಡ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸುವ ಮೂಲಕ ಆಚರಣೆ ಮಾಡಲಾಯಿತು.ಈ ಸಂದರ್ಭ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು, ರಾಜ್ಯ ಯುವ ಕಾಂಗ್ರೆಸ್ಸಿನ ಉಪಾಧ್ಯಕ್ಷ ಮಂಜುನಾಥ ಚೆಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿ ಸೋನಿಯಾ, ರಾಜ್ಯ ವಕ್ತಾರ ಆನಂದ್, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಬಜಗೋಳಿ, ಉಡುಪಿ ಜಿಲ್ಲಾ ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್, ನವೀನ್ ಸಾಲಿಯಾನ್ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಮೋದ್ ಪೂಜಾರಿ, ಅರ್ಜುನ್ ನಾಯರಿ, ಮಹಮ್ಮದ್ ಅತೀಫ್ ಕಾಪು, ಪ್ರ ಕಾರ್ಯದರ್ಶಿಗಳಾದ ಸಂಜಯ್ ಆಚಾರ್ಯ, ಯೋಗಿಶ್ ಇನ್ನ, ಮಂಜುನಾಥ ಜೋಗಿ, ಸ್ಟೀಫನ್ ಪ್ರಖ್ಯಾತ್, ಪ್ರದೀಪ್ ಶೆಟ್ಟಿ ನಲ್ಲೂರು , ಬೈಂದೂರು ಯುವ ಕಾಂಗ್ರೆಸ್ ಅಧ್ಯಕ್ಷ ಅಕ್ಷಯ್ ಶೆಟ್ಟಿ, ಯುವ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಸಜ್ಜನ್ ಶೆಟ್ಟಿ, ಪದಾಧಿಕಾರಿಗಳಾದ ಲತೀಫ್, ಲತೇಶ್ ಮತ್ತಿತರರು ಉಪಸ್ಥಿತರಿದ್ದರು.
ರಾಜ್ಯ ಸರ್ಕಾರಕ್ಕೆ 2 ವರ್ಷ: ಯುವ ಕಾಂಗ್ರೆಸ್‌ನಿಂದ ಜಿಲ್ಲಾಸ್ಪತ್ರೆ ರೋಗಿಗಳಿಗೆ ಹಣ್ಣು ವಿತರಣೆ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು ಜನರ ಬದುಕಿನಲ್ಲಿ ಬದಲಾವಣೆ ತರುವ ಮೂಲಕ ಯಶಸ್ವಿಯಾಗಿ ಎರಡು ವರ್ಷ ಪೂರೈಸಿದ ಸಂಭ್ರಮವನ್ನು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಅಜ್ಜರಕಾಡು ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿರುವ ಬಡ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸುವ ಮೂಲಕ ಆಚರಣೆ ಮಾಡಲಾಯಿತು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.