ಸಾರಾಂಶ
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಬೆಳಗ್ಗೆ ಭೇಟಿ ನೀಡಿ, ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜೊತೆಯಲ್ಲಿ ದೇವರ ದರ್ಶನ ಪಡೆದ ಬಳಿಕ ದೇವಾಲಯದಲ್ಲಿ ಧರ್ಮಾಧಿಕಾರಿಗಳು ಯಡಿಯೂರಪ್ಪ ಅವರನ್ನು ಗೌರವಿಸಿದರು.
ಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಬೆಳಗ್ಗೆ ಭೇಟಿ ನೀಡಿ, ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜೊತೆಯಲ್ಲಿ ದೇವರ ದರ್ಶನ ಪಡೆದ ಬಳಿಕ ದೇವಾಲಯದಲ್ಲಿ ಧರ್ಮಾಧಿಕಾರಿಗಳು ಯಡಿಯೂರಪ್ಪ ಅವರನ್ನು ಗೌರವಿಸಿದರು.ದೇವರ ದರ್ಶನ ಬಳಿಕ ಮಾತನಾಡಿದ ಮಾಜಿ ಸಿಎಂ, ಬಹಳ ವರ್ಷಗಳ ನಂತರ ಮಂಜುನಾಥಸ್ವಾಮಿ ದರ್ಶನ ಪಡೆದಿದ್ದೇನೆ. ಹೆಗ್ಗಡೆ ಅವರ ಆಶೀರ್ವಾದ ಕೂಡ ದೊರೆತಿದೆ. ನಮ್ಮ ಭಾಗದಲ್ಲಿ ಒಂದು ರೀತಿಯ ಬರಗಾಲವಿದೆ. ಸಕಾಲದಲ್ಲಿ ಮಳೆ ಬೆಳೆ ಆಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ. ಬರುವ ದಿನಗಳು ಒಳ್ಳೆ ದಿನಗಳಾಗಿರುತ್ತೆ ಅಂತಾ ನಾನು ಭಾವಿಸುತ್ತೇನೆ ಎಂದರು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ದ.ಕ. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಧರ್ಮಸ್ಥಳ ದೇವಸ್ಥಾನದ ಮ್ಯಾನೇಜರ್ ಪಾರ್ಶನಾಥ್, ಧರ್ಮಸ್ಥಳದ ಪಿ.ಎಸ್.ಕೃಷ್ಣ ಸಿಂಗ್ ಜೊತೆಯಲ್ಲಿದ್ದರು.ಸಂಸದ ಕ್ಯಾ.ಬ್ರಿಜೇಶ್ ಚೌಟ ಭೇಟಿ:
ಶಕ್ತಿನಗರದ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ದ.ಕ. ಸಂಸದರಾಗಿ ಚುನಾಯಿತರಾದ ಕ್ಯಾ. ಬ್ರಿಜೇಶ್ ಚೌಟ ಶುಕ್ರವಾರ ಭೇಟಿ ನೀಡಿದರು.ಕ್ಯಾ. ಬ್ರಿಜೇಶ್ ಚೌಟ ಅವರನ್ನು ಕ್ಷೇತ್ರದ ಆಡಳಿತ ಮೊಕ್ತೇಸರ ಡಾ. ಕೆ.ಸಿ.ನಾಯ್ಕ್ ಬರಮಾಡಿಕೊಂಡರು. ಬಳಿಕ ಸಪರಿವಾರ ಶ್ರೀ ಗೋಪಾಲಕೃಷ್ಣ ದೇವರ ದರ್ಶನ ಪಡೆದ ಸಂಸದರು ಪ್ರಸಾದ ಸ್ವೀಕರಿಸಿದರು.ಕ್ಷೇತ್ರದ ಪರವಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟರನ್ನು ಶಾಲು ಹೊದಿಸಿ ಶ್ರೀ ದೇವರ ಪ್ರಸಾದವನ್ನು ನೀಡುವುದರ ಮೂಲಕ ಗೌರವಿಸಲಾಯಿತು.
ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಪುರುಷೋತ್ತಮ್, ಶಕ್ತಿ ಸಂಸ್ಥೆಯ ಪ್ರಧಾನ ಸಲಹೆಗಾರ ರಮೇಶ್.ಕೆ. ಹಿಂದೂ ಜಾಗರಣಾ ವೇದಿಕೆ ಪ್ರಮುಖರು ಹಾಗೂ ವಕೀಲರಾದ ಹರೀಶ್ ಮತ್ತು ಹರ್ಷಿತ್, ಬಿಜೆಪಿ ದಕ್ಷಿಣ ಮಂಡಲ ಅಧ್ಯಕ್ಷ ರಮೇಶ್ ಕಂಡೆಟ್ಟು, ಸ್ಥಳೀಯ ಕಾರ್ಪೊರೇಟರ್‌ಗಳಾದ ವನಿತಾ ಪ್ರಸಾದ್, ಕಿಶೋರ್ ಕೊಟ್ಟಾರಿ, ಶಕೀಲಾ ಕಾವ, ವಕೀಲರಾದ ಮಹೇಶ್ ಜೋಗಿ, ದೇವಸ್ಥಾನದ ಆಡಳಿತಾಧಿಕಾರಿ ಆದೀಶ್ ಮತ್ತಿತರರಿದ್ದರು.