ಹಾಸನಾಂಬೆ ದೇವಿ ದರ್ಶನ ಪಡೆದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕುಟುಂಬದವರು

| Published : Oct 30 2024, 12:50 AM IST / Updated: Oct 30 2024, 12:54 PM IST

ಹಾಸನಾಂಬೆ ದೇವಿ ದರ್ಶನ ಪಡೆದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕುಟುಂಬದವರು
Share this Article
  • FB
  • TW
  • Linkdin
  • Email

ಸಾರಾಂಶ

 ಯಡಿಯೂರಪ್ಪ ಹಾಗೂ ಕುಟುಂಬದವರು   ಹಾಸನಾಂಬೆ ದೇವಿ ದರ್ಶನ ಪಡೆದರು. ಇದೇ ವೇಳೆ   ಮಾತನಾಡಿ, ಪ್ರತಿನಿತ್ಯ ಇಲ್ಲಿಗೆ ಬಂದು ಹಾಸನಾಂಬೆ ದರ್ಶನ ಮಾಡುತ್ತಿದ್ದು, ವರ್ಷಪೂರ್ತಿ ಅದೇ ದೀಪ ಉರಿದು ತಾಯಿ ವರ್ಷಕ್ಕೆ ಒಂದು ಬಾರಿ ಮಾತ್ರ ಭಕ್ತರಿಗೆ ದರ್ಶನ ನೀಡಿ ಆಶೀರ್ವಾದ ಮಾಡಲಾಗುತ್ತಿದೆ  ಎಂದರು.

  ಹಾಸನ : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಕುಟುಂಬದವರು ಮಂಗಳವಾರ ಸಂಜೆ ಆಗಮಿಸಿ ಹಾಸನಾಂಬೆ ದೇವಿ ದರ್ಶನ ಪಡೆದರು. ದೇವಾಲಯದ ಆವರಣಕ್ಕೆ ಆಗಮಿಸುತ್ತಿದ್ದಂತೆ ಪೂರ್ಣಕುಂಭದೊಡನೆ ಸ್ವಾಗತ ಕೋರಿ ಬರಮಾಡಿಕೊಳ್ಳಲಾಯಿತು. ಹಾಸನಾಂಬೆ ದರ್ಶನದ ನಂತರ ದರ್ಬಾರ್ ಗಣಪತಿ, ಶ್ರೀ ಸಿದ್ದೇಶ್ವರ ದೇವರ ದರ್ಶನ ಪಡೆದುಕೊಂಡರು. 

ಇದಾದ ನಂತರ ಜಿಲ್ಲಾಡಳಿತದಿಂದ ಸನ್ಮಾನಿಸಿ ಗೌರವಿಸಿದರು. ಇದೇ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾತನಾಡಿ, ಪ್ರತಿನಿತ್ಯ ಇಲ್ಲಿಗೆ ಬಂದು ಹಾಸನಾಂಬೆ ದರ್ಶನ ಮಾಡುತ್ತಿದ್ದು, ವರ್ಷಪೂರ್ತಿ ಅದೇ ದೀಪ ಉರಿದು ತಾಯಿ ವರ್ಷಕ್ಕೆ ಒಂದು ಬಾರಿ ಮಾತ್ರ ಭಕ್ತರಿಗೆ ದರ್ಶನ ನೀಡಿ ಆಶೀರ್ವಾದ ಮಾಡಲಾಗುತ್ತಿದೆ. ತಾಯಿ ದರ್ಶನ ಮಾಡಿರುವುದು ನಮ್ಮ ಸೌಭಾಗ್ಯ ಎಂದರು. 

ಹಾಸನಾಂಬೆ ದರ್ಶನ ಪಡೆದು ತಾಯಿಯಲ್ಲಿ ಪ್ರಾರ್ಥಿಸಲಾಗಿದೆ. ನಾಡಿನಲ್ಲಿ ಸರಿಯಾದ ಸಮಯದಲ್ಲಿ ಮಳೆಯಾಗಿ ಈ ನಾಡಿನ ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ಸಿಕ್ಕಿ ಬದುಕು ಹಸನಾಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಲಾಗಿದೆ ಎಂದರು. ತಾಯಿಯ ದರ್ಶನ ಪಡೆದಿರುವುದು ನನ್ನು ಪುಣ್ಯ ಎಂದು ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಜೆ. ಗೌಡ, ಶಾಸಕ ಸಿಮೆಂಟ್ ಮಂಜು, ಹುಲ್ಲಳ್ಳಿ ಸುರೇಶ್, ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ, ಇತರರು ಉಪಸ್ಥಿತರಿದ್ದರು.