ಸಾರಾಂಶ
ಯೇನೆಪೋಯ ಪರಿಗಣಿತ ವಿಶ್ವವಿದ್ಯಾನಿಲಯದ ಯೇನೆಪೋಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ವಿಶ್ವ ಹೃದಯ ದಿನಾಚರಣೆ ನಡೆಯಿತು.
ಕನ್ನಡಪ್ರಭ ವಾರ್ತೆ ಉಳ್ಳಾಲ
ಹೃದಯಾಘಾತ ಸಂದರ್ಭದಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಚಿಕಿತ್ಸಾ ವಿಧಾನಗಳ ಕುರಿತು ಸಮಾಜದಲ್ಲಿ ಇನ್ನಷ್ಟು ಅರಿವನ್ನು ಬೆಳೆಸುವ ಕಾರ್ಯಗಳಾಗಬೇಕಿದೆ. ಮುಖ್ಯವಾಗಿ ವಾಹನ ಚಾಲಕರಿಗೆ, ಮಾರುಕಟ್ಟೆ ಸಿಬ್ಬಂದಿ, ಇತರ ವಲಯಗಳ ಕಾರ್ಮಿಕರಿಗೂ ಇಂತಹ ತರಬೇತಿಗಳ ಮೂಲಕ ಜಾಗೃತಿ ಮೂಡಿಸಿದರೆ ಅಮೂಲ್ಯ ಜೀವಗಳ ರಕ್ಷಣೆ ಸಾಧ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಎಚ್.ಆರ್. ತಿಮ್ಮಯ್ಯ ಹೇಳಿದರು.ಅವರು ಬುಧವಾರ ಯೇನೆಪೋಯ ಪರಿಗಣಿತ ವಿಶ್ವವಿದ್ಯಾನಿಲಯದ ಯೇನೆಪೋಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ವಿಶ್ವ ಹೃದಯ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.ಹೃದಯ ಇದ್ದರೆ ಸಾಲದು ಹೃದಯ ಶ್ರೀಮಂತಿಕೆಯೂ ನಮ್ಮಲ್ಲಿ ಇರಬೇಕು. ಈ ನಿಟ್ಟಿನಲ್ಲಿ ಬಡವರಿಗೆ ಉಚಿತವಾಗಿ ಹೃದಯ ಸಂಬಂಧಿ ಚಿಕಿತ್ಸೆ ಸೇರಿದಂತೆ ಅನೇಕ ರೀತಿಯ ಆರೋಗ್ಯ ಸೇವೆಯನ್ನು ಒದಗಿಸಿಕೊಡುತ್ತಿರುವ ಯೇನೆಪೋಯ ಮೆಡಿಕಲ್ ಕಾಲೇಜಿನ ಕಾರ್ಯ ಶ್ಲಾಘನೀಯ ಎಂದರು.ಯೇನೆಪೋಯ ಪರಿಗಣಿತ ವಿವಿಯ ಕುಲಪತಿ ಪ್ರೊ.ಡಾ.ವಿಜಯ ಕುಮಾರ್, ಮುಖ್ಯ ಅತಿಥಿಯಾಗಿ ಭಾಗವಹಿಸಿ, ಯೇನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯು ಕಳೆದ ಹಲವಾರು ವರ್ಷಗಳಿಂದ ಜನರ ಆರೋಗ್ಯ ಸೇವೆಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಾ ಸಮಾಜಪರ ಕಾಳಜಿಯೊಂದಿಗೆ ಮುನ್ನಡೆಯುತ್ತಿದೆ ಎಂದರು.ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ನವೀನ್ ಚಂದ್ರ ಕುಲಾಲ್ ಮಾತನಾಡಿದರು.ಮೆಡಿಕಲ್ ಕಾಲೇಜಿನ ಮೆಡಿಕಲ್ ಸುಪರಿಡೆಂಟ್ ಡಾ.ಹಬೀಬ್ ರಹಿಮಾನ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.ಯೇನೆಪೋಯ ಪರಿಗಣಿತ ವಿವಿ ಕುಲಸಚಿವರಾದ ಡಾ.ಕೆ.ಎಸ್.ಗಂಗಾಧರ ಸೋಮಯಾಜಿ, ಪ್ರಾಂಶುಪಾಲ ಡಾ.ಎಂ.ಎಸ್.ಮೂಸಬ್ಬ, ಉಪಪ್ರಾಂಶುಪಾಲ ಡಾ. ಪ್ರಕಾಶ್ ಸಲ್ದಾನ, ಯೇನೆಪೋಯ ಮೆಡಿಕಲ್ ಕಾಲೇಜಿನ ಕಾರ್ಡಿಯಾಲಜಿ ವಿಭಾಗದ ಪ್ರಾಧ್ಯಾಪಕ ಡಾ.ಪ್ರಶಾಂತ್ ಆರ್.ಎಂ. ಮೊದಲಾದವರು ಉಪಸ್ಥಿತರಿದ್ದರು.ಯೇನೆಪೋಯ ಮೆಡಿಕಲ್ ಕಾಲೇಜಿನ ಸಹಾಯಕ ವೈದ್ಯಕೀಯ ಅಧೀಕ್ಷ ಡಾ. ನಾಗರಾಜ್ ಪ್ರಾಸ್ತಾವಿಕವಾಗಿ ಮಾತನಾಡಿದರು.ಮೆಡಿಸಿನ್ ವಿಭಾಗದ ಡೀನ್ ಡಾ.ಅಭಯ್ ನಿರ್ಗುಡೆ ಸ್ವಾಗತಿಸಿದರು. ಸಹಾಯಕ ವೈದ್ಯಕೀಯ ಅಧೀಕ್ಷಕ ಡಾ.ಮುಖ್ತಾರ್ ಅಬ್ದುಲ್ಲಾ ವಂದಿಸಿದರು. ಸುಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.