ದೊಡ್ಡಬಳ್ಳಾಪುರ: ಎತ್ತಿನಹೊಳೆ ಯೋಜನೆ ಅವೈಜ್ಞಾನಿಕವಾಗಿದ್ದು, ಸಂವಿಧಾನದ ಆಶಯ ಮತ್ತು ಪರಿಸರ ನಿಯಮ ಉಲ್ಲಂಘಿಸಲಾಗಿದೆ. ನ್ಯಾಯಾಲಯ ತಜ್ಞರ ಸಮಿತಿ ರಚಿಸಿ ವೈಜ್ಞಾನಿಕ ಮಾಹಿತಿ ಪಡೆಯಬೇಕು. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕೋರಿ ತಾಲೂಕಿನ ಲಕ್ಕೇನಹಳ್ಳಿಯ ರೈತ ಬೈರಣ್ಣ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ದೊಡ್ಡಬಳ್ಳಾಪುರ: ಎತ್ತಿನಹೊಳೆ ಯೋಜನೆ ಅವೈಜ್ಞಾನಿಕವಾಗಿದ್ದು, ಸಂವಿಧಾನದ ಆಶಯ ಮತ್ತು ಪರಿಸರ ನಿಯಮ ಉಲ್ಲಂಘಿಸಲಾಗಿದೆ. ನ್ಯಾಯಾಲಯ ತಜ್ಞರ ಸಮಿತಿ ರಚಿಸಿ ವೈಜ್ಞಾನಿಕ ಮಾಹಿತಿ ಪಡೆಯಬೇಕು. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕೋರಿ ತಾಲೂಕಿನ ಲಕ್ಕೇನಹಳ್ಳಿಯ ರೈತ ಬೈರಣ್ಣ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಎತ್ತಿನಹೊಳೆ ನೀರು ಸಂಗ್ರಹಕ್ಕಾಗಿ ನಿರ್ಮಿಸಲಾಗುತ್ತಿರುವ ಜಲಾಶಯದಿಂದ ಮುಳುಗಡೆಯಾಗುತ್ತಿರುವ ಗ್ರಾಮಗಳ ಮತ್ತಷ್ಟು ರೈತರು ಆ.11ರಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಿದ್ದಾರೆ ಎಂದು ಬೈರಣ್ಣ ಅವರ ವಕೀಲ ನರಸಿಂಹಗೌಡ ಮಾಹಿತಿ ನೀಡಿದ್ದಾರೆ.

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಎತ್ತಿನಹೊಳೆ ಯೋಜನೆಯಿಂದ ಸಾಮಾಜಿಕ, ಪರಿಸರದ ಮೇಲಾಗುವ ದುಷ್ಪರಿಣಾಮಗಳ ಅಧ್ಯಯನ ನಡೆದಿಲ್ಲ. ಕುಡಿಯುವ ನೀರಿನ ನೆಪದಲ್ಲಿ ಯೋಜನೆ ಜಾರಿಗೆ ಸರ್ಕಾರ ಮುಂದಾಗಿದೆ. ಸಂವಿಧಾನ, ಕಾನೂನು, ಪರಿಸರ ನಿಯಮಗಳನ್ನು ಸ್ಪಷ್ಟವಾಗಿ ಉಲ್ಲಂಘಿಸಲಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಆಕ್ಷೇಪವಿದ್ದರೂ ಯೋಜನೆ ಮುಂದುವರಿಕೆ:

ಕೇಂದ್ರ ಅರಣ್ಯ, ಪರಿಸರ, ಹವಾಮಾನ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಎತ್ತಿನಹೊಳೆ ಜಲಾಶಯ ನಿರ್ಮಾಣದಿಂದ ಮುಳುಗಡೆಯಾಗುವ ಜಮೀನು ಬದಲಾವಣೆ ಸಚಿವಾಲಯದ ಅಧಿಕಾರಿಗಳ ತಂಡ ಇತ್ತೀಚೆಗೆ ಎತ್ತಿನಹೊಳೆ ಯೋಜನೆ ಕಾಮಗಾರಿ ನಡೆಯುತ್ತಿರುವ ಪ್ರದೇಶಗಳಿಗೆ ಭೇಟಿ ನೀಡಿ ಆಕ್ಷೇಪ ವ್ಯಕ್ತಪಡಿಸಿದ್ದರೂ ಕಾಮಗಾರಿ ಮುಂದುವರಿಸಲಾಗುತ್ತಿದೆ. ಬೆಂಗಳೂರಿನ ಐಐಎಸ್‌ಸಿ, ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹೈಡ್ರಾಲಜಿ, ಕೇಂದ್ರ ಜಲ ಆಯೋಗ, ಇವೆಲ್ಲವು ಸಹ ಎತ್ತಿನಹೊಳೆ ಪ್ರದೇಶದಲ್ಲಿ ಮಳೆ ನೀರಿನ ಲಭ್ಯತೆ ಕಡಿಮೆ ಇದೆ ಎಂದು ಅಭಿಪ್ರಾಯಪಟ್ಟಿವೆ. ಸೂಕ್ಷ್ಮ ಜೀವವೈವಿದ್ಯ ಹೊಂದಿರುವ ಪಶ್ಚಿಮಘಟ್ಟಕ್ಕೆ ಎತ್ತಿನಹೊಳೆ ಕಾಮಗಾರಿಯಿಂದ ಧಕ್ಕೆಯಾಗಿದೆ. ಇದು ದಕ್ಷಿಣ ಭಾರತದ ಮಳೆ ಮಾಪನದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂದು ನ್ಯಾಯಾಲಯಕ್ಕೆ ದಾಖಲೆ ಸಮೇತ ಅರ್ಜಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಅವೈಜ್ಞಾನಿಕ ಪ್ರಕ್ರಿಯೆಗಳ ವಿರುದ್ಧ ಹೋರಾಟ:

ಕೊರಟಗೆರೆ ತಾಲೂಕಿನ ಬೈರಗೊಂಡ್ಲು ಪ್ರದೇಶದಲ್ಲಿ 5 ಟಿಎಂಸಿ ನೀರು ಸಂಗ್ರಹಕ್ಕೆ ಜಲಾಶಯ ನಿರ್ಮಿಸಲು ಯೋಜನೆ ಸಿದ್ದಪಡಿಸಲಾಗಿತ್ತು. ಆದರೆ ಸ್ಥಳೀಯ ರಾಜಕೀಯ ಒತ್ತಡ ಹಾಗೂ ರೈತರ ವಿರೋಧಕ್ಕೆ ಮಣಿದ ರಾಜ್ಯ ಸರ್ಕಾರ ಈಗ 3.20 ಟಿಎಂಸಿ ನೀರು ಸಂಗ್ರಹಕ್ಕೆ ಯೋಜನೆ ರೂಪಿಸಿ ಜಲಾಶಯವನ್ನು ಲಕ್ಕೇನಹಳ್ಳಿ, ವಡೇರಹಳ್ಳಿ ಪ್ರದೇಶಕ್ಕೆ ಸ್ಥಳಾಂತರ ಮಾಡಿದೆ. ಬೇಕಾಬಿಟ್ಟಿಯಾಗಿ ಯೋಜನಾ ವೆಚ್ಚ ಹೆಚ್ಚಿಸುವ ಮೂಲಕ ಸರ್ಕಾರದ ಬೊಕ್ಕಸಕ್ಕೆ ದೊಡ್ಡ ಮೊತ್ತದ ನಷ್ಟ ಉಂಟುಮಾಡಲಾಗಿದೆ. ಯೋಜನೆಗೆ ಬಳಸಿರುವ ಎಲ್ಲಾ ನಿಯಮಗಳು ಅವೈಜ್ಞಾನಿಕವಾಗಿವೆ. ಇದರ ವಿರುದ್ಧ ಸೂಕ್ತ ಕ್ರಮಕ್ಕಾಗಿ ನ್ಯಾಯಾಲಯದಲ್ಲಿ ಮನವಿ ಮಾಡಲಾಗಿದೆ ಎಂದು ವಕೀಲರು ತಿಳಿಸಿದ್ದಾರೆ.

ಬಾಕ್ಸ್‌...............

2,500 ಎಕರೆ ಕೃಷಿ ಜಮೀನು ಮುಳುಗಡೆ:

ಜಲಾಶಯ ನಿರ್ಮಿಸಲು ಹೊರಟಿರುವ ಪ್ರದೇಶದಲ್ಲಿ ಸುಮಾರು ಏಳು ಗ್ರಾಮಗಳು ಸೇರಿದಂತೆ 2,500 ಎಕರೆ ಫಲವತ್ತಾದ ಕೃಷಿ ಜಮೀನು ಮುಳುಗಡೆಯಾಗುತ್ತಿದೆ. ಜಲಾಶಯ ನಿರ್ಮಾಣವಾಗುತ್ತಿರುವ ಗ್ರಾಮಗಳಲ್ಲಿ ಸಭೆ ನಡೆಸಿ ಜನರ ಅಭಿಪ್ರಾಯ ಪಡೆದಿಲ್ಲ. ನಿಖರವಾದ ಡಿಪಿಆರ್ ಇಲ್ಲದೇ ಎತ್ತಿನಹೊಳೆ ಯೋಜನೆ ಮುಂದುವರಿಸಲಾಗುತ್ತಿದೆ ಎಂದು ಪಿಐಎಲ್‌ನಲ್ಲಿ ಆರೋಪಿಸಲಾಗಿದೆ.