ಕುಂದಾಪುರ: ಇಲ್ಲಿನ ಮೂಡಲಕಟ್ಟೆಯ ಐಎಂಜೆ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಹಾಗೂ ಮೂಡಲಕಟ್ಟೆ ಕಾಲೇಜ್ ಆಫ್ ಫಿಸಿಯೋಥೆರಪಿ ಆಶ್ರಯದಲ್ಲಿ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಾಗೂ 10 ದಿನಗಳ ಯೋಗ ಶಿಬಿರಕ್ಕೆ ಬುಧವಾರ ಚಾಲನೆ ನೀಡಲಾಯಿತು.ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಣಿಪಾಲದ ಮುನಿಯಾಲ್ ಕಾಲೇಜ್ ಆಫ್ ಯೋಗ ಆ್ಯಂಡ್ ನ್ಯಾಚುರೋಪತಿಯ ಉಪಪ್ರಾಂಶುಪಾಲ ಡಾ. ಸಾತಪ್ಪ ಹೂವಿನಹಳ್ಳಿ ಮಾತನಾಡಿ, ಯೋಗವು ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ವೃದ್ಧಿಸುವ ಅತ್ಯುತ್ತಮ ಸಾಧನವಾಗಿದ್ದು, ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.ಮೂಡಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರಾಂಶುಪಾಲ ಡಾ. ರಾಮಕೃಷ್ಣ ಹೆಗ್ಡೆ ಅವರು ಮಾತನಾಡಿ, ಯೋಗವು ಕೇವಲ ವ್ಯಾಯಾಮವಲ್ಲ, ಅದು ಸಮಗ್ರ ಜೀವನಶೈಲಿಯಾಗಿದ್ದು, ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ಆತ್ಮವಿಶ್ವಾಸ ಮತ್ತು ಆರೋಗ್ಯಕರ ಮನೋಭಾವವನ್ನು ಬೆಳೆಸುತ್ತದೆ ಎಂದರು.
ಈ ಸಂದರ್ಭ ಮೂಡಲಕಟ್ಟೆ ಶಿಕ್ಷಣ ಸಂಸ್ಥೆಗಳ ಡೀನ್ ಡಾ. ಪದ್ಮಚರಣ ಸ್ವೈನ್, ಮೂಡಲಕಟ್ಟೆ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಪ್ರೊ. ಜೆನ್ನಿಫರ್ ಫ್ರೀಡಾ ಮೆನೆಜಸ್ ಉಪಸ್ಥಿತರಿದ್ದರು. ಐಎಂಜೆ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಹಾಗೂ ಮೂಡಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸಸ್‌ನ ಪ್ರಾಂಶುಪಾಲರಾ ಪ್ರೊ. ಹೇಮಲತಾ, ಐಎಂಜೆ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್‌ನ ಉಪಪ್ರಾಂಶುಪಾಲರಾದ ಸೌಜನ್ಯ ಉಪಸ್ಥಿತರಿದ್ದರು. ಶಿಕ್ಷಣ ಸಂಸ್ಥೆಗಳ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.ಮೂಡ್ಲಕಟ್ಟೆ ಐಎಂಜೆಯಲ್ಲಿ ಯೋಗ ದಿನಾಚರಣೆ
ಕುಂದಾಪುರ: ಇಲ್ಲಿನ ಮೂಡಲಕಟ್ಟೆಯ ಐಎಂಜೆ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಹಾಗೂ ಮೂಡಲಕಟ್ಟೆ ಕಾಲೇಜ್ ಆಫ್ ಫಿಸಿಯೋಥೆರಪಿ ಆಶ್ರಯದಲ್ಲಿ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಾಗೂ 10 ದಿನಗಳ ಯೋಗ ಶಿಬಿರಕ್ಕೆ ಬುಧವಾರ ಚಾಲನೆ ನೀಡಲಾಯಿತು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.