ಸಾರಾಂಶ
ಕುಂಜಿಬೆಟ್ಟು ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಯೋಗವು ಎಲ್ಲರನ್ನೂ ಒಂದುಗೂಡಿಸುತ್ತದೆ. ಯೋಗದಿಂದ ಉತ್ತಮ ಆರೋಗ್ಯ ಗಳಿಕೆ ಆಗುವುದರಿಂದ ಆರೋಗ್ಯಯುತ ನಾಗರಿಕರಿಂದ ಆರೋಗ್ಯಯುತ ಸಮಾಜ ನಿರ್ಮಾಣ ಸಾಧ್ಯ ಎಂದು ಉಡುಪಿ ಪತಂಜಲಿ ಯೋಗ ಸಮಿತಿಯ ಸದಾನಂದ ಶೆಟ್ಟಿ ಹೇಳಿದರು. ಅವರು ಇಲ್ಲಿನ ಕುಂಜಿಬೆಟ್ಟು ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು. ಯೋಗ ತರಬೇತುದಾರರಾದ ನಾಗರಾಜ್ ಶೇಟ್ ಮತ್ತು ಕಾಲೇಜಿನ ಮುಖ್ಯಸ್ಥೆ ಪ್ರೊ. ಸುರೇಖಾ ಮಾತನಾಡಿದರು.ಕಾಲೇಜಿನ ನಿರ್ದೋಶಕಿ ಪ್ರೊ. ನಿರ್ಮಲಾ ಕುಮಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿ ಡಾ.ಸಿ.ಬಿ. ನವೀನ್ ಚಂದ್ರ ಕಾರ್ಯಕ್ರಮವನ್ನು ಸಂಯೋಜಿಸಿದರು. ವಿದ್ಯಾರ್ಥಿಗಳಾದ ಸಮೀರ್ ಸ್ವಾಗತಿಸಿದರು, ನಾಗರತ್ನ ವಂದಿಸಿದರು. ದಿಶಾ ಕಾರ್ಯಕ್ರಮ ನಿರೂಪಿಸಿದರು. ಎನ್‌ಎಸ್‌ಎಸ್ ಕಾರ್ಯದರ್ಶಿ ಭರತ್ ಹಾಗೂ ಸುಮಾ ಉಪಸ್ಥಿತರಿದ್ದರು.