ಕನ್ನಡಪ್ರಭ ವಾರ್ತೆ ಅರಸೀಕೆರೆ ವಿಶ್ವ ಆರೋಗ್ಯ ದಿನದ ಅಂಗವಾಗಿ ನಗರದ ಯೋಗ ಕೇಂದ್ರಗಳು ಮತ್ತು ತಾಲೂಕಿನ ಶಾಲೆಗಳಲ್ಲಿ ವಿಶ್ವ ಯೋಗ ದಿನವನ್ನು ಸಂಭ್ರಮದಿಂದ ಆಯೋಜಿಸಲಾಗಿತ್ತು. ತಾಲೂಕಿನ ಸುಮಾರು ಸಾವಿರಕ್ಕೂ ಅಧಿಕ ಶಾಲಾ- ಕಾಲೇಜುಗಳಲ್ಲಿ ವಿಶ್ವ ಯೋಗ ದಿನದ ಅಂಗವಾಗಿ ವಿದ್ಯಾರ್ಥಿಗಳು ಶಿಕ್ಷಕರ ಮಾರ್ಗದರ್ಶನದಲ್ಲಿ ಯೋಗ ಪ್ರದರ್ಶನ ನೀಡಿದರು, ಶ್ರೀ ಗುರು ಸಿದ್ದರಾಮೇಶ್ವರ ಸಮುದಾಯ ಭವನದ ಆವರಣದಲ್ಲಿ ಸಂಸ್ಕಾರ ಭಾರತಿ ವತಿಯಿಂದ ದಲ್ಲಿನ ಯೋಗ ಕೇಂದ್ರಗಳ ಯೋಗಾಪಟುಗಳು ಹಾಗೂ ಯೋಗ ಶಿಕ್ಷಕ ಬಸವರಾಜ್ ಮಾರ್ಗದರ್ಶನದಲ್ಲಿ ಯೋಗ ಪ್ರದರ್ಶನ ನೀಡಿದರು.ನಗರ ಜೇನುಕಲ್ ಬಡಾವಣೆಯಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಯೋಗ ದಿನ ಅಧಿಕಾರಿ ಮೋಹನ್ ಕುಮಾರ್ ಪಾಲ್ಗೊಂಡು ಯೋಗದ ಮಹತ್ವ ಅನ್ನೋದು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ತರಳಬಾಳು ಸಂಸ್ಥೆ ಶಾಲೆಯಲ್ಲಿ ನೂರಾರು ವಿದ್ಯಾರ್ಥಿಗಳು ಯೋಗ ಶಿಕ್ಷಕರಾದ ಜೀವನ್ ಮತ್ತು ಅಣ್ಣಪ್ಪ ಅವರ ಮಾರ್ಗದರ್ಶನದಲ್ಲಿ ಯೋಗ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದರು, ಬಿಇಒ ಮೋಹನ್ ಕುಮಾರ್ 11ನೇ ವರ್ಷದ ವಿಶ್ವ ಯೋಗ ದಿನದ ಮಹತ್ವ ಮತ್ತು ಅದರ ಉಪಯೋಗಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು, ಶಿಕ್ಷಣ ಸಂಯೋಜಕ ಮಲ್ಲೇಶ್, ಸಿಆರ್‌ಪಿ ವಿಷ್ಣುವರ್ಧನ್, ಬಹಳ ಮುಖ್ಯ ಶಿಕ್ಷಕ ಸುನಿಲ್ ಹಾಗೂ ಸಹ ಶಿಕ್ಷಕರು ಸಿಬ್ಬಂದಿ ಪಾಲ್ಗೊಂಡಿದ್ದರು.
ಅರಸೀಕೆರೆಯಲ್ಲಿ ಯೋಗ ದಿನ ಆಚರಣೆ
ವಿಶ್ವ ಆರೋಗ್ಯ ದಿನದ ಅಂಗವಾಗಿ ನಗರದ ಯೋಗ ಕೇಂದ್ರಗಳು ಮತ್ತು ತಾಲೂಕಿನ ಶಾಲೆಗಳಲ್ಲಿ ವಿಶ್ವ ಯೋಗ ದಿನವನ್ನು ಸಂಭ್ರಮದಿಂದ ಆಯೋಜಿಸಲಾಗಿತ್ತು. ತಾಲೂಕಿನ ಸುಮಾರು ಸಾವಿರಕ್ಕೂ ಅಧಿಕ ಶಾಲಾ- ಕಾಲೇಜುಗಳಲ್ಲಿ ವಿಶ್ವ ಯೋಗ ದಿನದ ಅಂಗವಾಗಿ ವಿದ್ಯಾರ್ಥಿಗಳು ಶಿಕ್ಷಕರ ಮಾರ್ಗದರ್ಶನದಲ್ಲಿ ಯೋಗ ಪ್ರದರ್ಶನ ನೀಡಿದರು, ಶ್ರೀ ಗುರು ಸಿದ್ದರಾಮೇಶ್ವರ ಸಮುದಾಯ ಭವನದ ಆವರಣದಲ್ಲಿ ಸಂಸ್ಕಾರ ಭಾರತಿ ವತಿಯಿಂದ ದಲ್ಲಿನ ಯೋಗ ಕೇಂದ್ರಗಳ ಯೋಗಾಪಟುಗಳು ಹಾಗೂ ಯೋಗ ಶಿಕ್ಷಕ ಬಸವರಾಜ್ ಮಾರ್ಗದರ್ಶನದಲ್ಲಿ ಯೋಗ ಪ್ರದರ್ಶನ ನೀಡಿದರು
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.