ಮುಂಡರಗಿಯಲ್ಲಿ 21ರಂದು ಯೋಗ ಪ್ರದರ್ಶನ

| Published : Jun 19 2024, 01:12 AM IST

ಮುಂಡರಗಿಯಲ್ಲಿ 21ರಂದು ಯೋಗ ಪ್ರದರ್ಶನ
Share this Article
  • FB
  • TW
  • Linkdin
  • Email

ಸಾರಾಂಶ

10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜೂ. 21ರಂದು ಬೆಳಗ್ಗೆ 6 ಗಂಟೆಗೆ ಅನ್ನದಾನೀಶ್ವರ ವಿದ್ಯಾ ಸಮಿತಿಯ ಶತಮಾನೋತ್ಸವದ ಅಂಗವಾಗಿ ಆಯುಷ್ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಮುಂಡರಗಿ ಪಟ್ಟಣದ ವಿವಿಧ ಯೋಗ ಸಂಘಟನೆಗಳ ಆಶ್ರಯದಲ್ಲಿ ಯೋಗ ಪ್ರದರ್ಶನ ಜರುಗಲಿದೆ.

ಮುಂಡರಗಿ: 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜೂ. 21ರಂದು ಬೆಳಗ್ಗೆ 6 ಗಂಟೆಗೆ ಅನ್ನದಾನೀಶ್ವರ ವಿದ್ಯಾ ಸಮಿತಿಯ ಶತಮಾನೋತ್ಸವದ ಅಂಗವಾಗಿ ಆಯುಷ್ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಪಟ್ಟಣದ ವಿವಿಧ ಯೋಗ ಸಂಘಟನೆಗಳ ಆಶ್ರಯದಲ್ಲಿ ಯೋಗ ಪ್ರದರ್ಶನ ಜರುಗಲಿದೆ ಎಂದು ಜ.ಅ. ವಿದ್ಯಾ ಸಮಿತಿ ಆಡಳಿತಾಧಿಕಾರಿ ಡಾ. ಬಿ.ಜಿ. ಜವಳಿ, ಡಾ. ಪಿ.ಬಿ. ಹಿರೇಗೌಡ್ರ, ಮಂಜುಳಾ ಇಟಗಿ ಹೇಳಿದರು.

ಅವರು ಮಂಗಳವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಜ. ನಾಡೋಜ ಅನ್ನದಾನೀಶ್ವರ ಮಹಾಸ್ವಾಮೀಜಿ ಸಾನ್ನಿಧ್ಯವಹಿಸುವರು. ಶ್ರೀಮಠದ ಉತ್ತರಾಧಿಕಾರಿ ಜ.ಡ. ಮಲ್ಲಿಕಾರ್ಜುನ ಸ್ವಾಮೀಜಿ ಸಮ್ಮುಖ ವಹಿಸಿ ಮಾತನಾಡಲಿದ್ದಾರೆ. ತಹಸೀಲ್ದಾರ್ ಧನಂಜಯ ಮಾಲಗತ್ತಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ತಾಪಂ ಕಾರ್ಯನಿರ್ವಾಹಕ ಅಧಿಕಾರಿ, ವಿವಿಧ ಇಲಾಖೆ ಅಧಿಕಾರಿಗಳು, ಯೋಗ ಸಂಘಟನೆಗಳ ಮುಖ್ಯಸ್ಥರು, ಪಟ್ಟಣದ ವಿವಿಧ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ.

ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜೂ. 19ರಂದು ಬೆಳಗ್ಗೆ 10 ಗಂಟೆಗೆ ಪಟ್ಟಣದಲ್ಲಿ ವಿವಿಧ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಯೋದ ಸಂಘಟಿಕರಿಂದ ಯೋಗ ಜಾಗೃತಿ ಜಾಥಾ ಜರುಗಲಿದೆ. ಜ. ನಾಡೋಜ ಅನ್ನದಾನೀಶ್ವರ ಮಹಾಸ್ವಾಮೀಜಿ ಯೋಗ ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಿದ್ದಾರೆ. ಅನ್ನದಾನೀಶ್ವರ ಮಠದಿಂದ ಪ್ರಾರಂಭವಾಗುವ ಜಾಥಾ ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಸಂಚರಿಸಿ ಆನಂತರ ಶ್ರೀಮಠಕ್ಕೆ ಬಂದು ಮುಕ್ತಾಯವಾಗಲಿದೆ. ಪಟ್ಟಣದ ಸಾರ್ವಜನಿಕರು ಯೋಗ ಪ್ರದರ್ಶನ ಹಾಗೂ ಯೋಗ ಜಾಗೃತಿ ಜಾಥಾದಲ್ಲಿ ಪಾಲ್ಗೊಳ್ಳಬೇಕು ಎಂದು ವಿನಂತಿಸಿದರು.

ಪುರಸಭೆ ಸದಸ್ಯ ನಾಗೇಶ ಹುಬ್ಬಳ್ಳಿ, ದೈಹಿಕ ಶಿಕ್ಷಣಾಧಿಕಾರಿ ಬಸವಲಿಂಗಪ್ಪ, ಮಂಜುನಾಥ ಅಳವಂಡಿ, ಬಿ.ಆರ್. ಕುಲಕರ್ಣಿ, ಜಗದೀಶಕುಮಾರ ಸೋನಿ, ಸಚಿನ್ ಉಪ್ಪಾರ, ನಾರಾಯಣಪ್ಪ ಗುಬ್ಬಿ, ಕಾಶೀನಾಥ ಶಿರಬಡಗಿ, ನೀತಾ ಕಂಚಗಾರ ಉಪಸ್ಥಿತರಿದ್ದರು.