ಸಾರಾಂಶ
ಕುಷ್ಟಗಿ ತಾಲೂಕಿನ ಕಬ್ಬರಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀಳಗಿ ಗ್ರಾಮದ ಅಮೃತ ಸರೋವರ ಕೆರೆಯ ದಡದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು.
ಕನ್ನಡಪ್ರಭ ವಾರ್ತೆ ಕುಷ್ಟಗಿ
ಮಾನಸಿಕ ಒತ್ತಡದ ನಿವಾರಣೆಗಾಗಿ ಹಾಗೂ ಆರೋಗ್ಯಕರ ಜೀವನಕ್ಕಾಗಿ ನಾವು ಯೋಗಭ್ಯಾಸವನ್ನು ಮಾಡಬೇಕು ಎಂದು ತಾಪಂ ಇಒ ನಿಂಗಪ್ಪ ಮಸಳಿ ಅಭಿಪ್ರಾಯಪಟ್ಟರು.ತಾಲೂಕಿನ ಕಬ್ಬರಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀಳಗಿ ಗ್ರಾಮದ ಅಮೃತ ಸರೋವರ ಕೆರೆಯ ದಡದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮಾತನಾಡಿದರು.
ಯೋಗ ಒಂದು ಮನಸು ಮತ್ತು ದೇಹವನ್ನು ಸಂಪರ್ಕಿಸುವ ಪ್ರಾಚೀನ ಕಲೆಯಾಗಿದ್ದು, ಇತ್ತೀಚಿನ ದಿನಗಳಲ್ಲಿ ವಿಶ್ವಾದ್ಯಂತ ಹೆಚ್ಚಿನ ಜನರು ತಮ್ಮ ಮಾನಸಿಕ ಒತ್ತಡ ಮತ್ತು ದೈಹಿಕ ಸೌಂದರ್ಯಕ್ಕಾಗಿ ಯೋಗದ ಮೊರೆ ಹೋಗುತ್ತಿದ್ದಾರೆ ಎಂದರು.ಭಾರತ ಜಗತ್ತಿಗೆ ನೀಡಿದ ಒಂದು ದೊಡ್ಡ ಕೊಡುಗೆ ಯೋಗವಾಗಿದೆ. ಯೋಗ 6000 ವರ್ಷಕ್ಕೂ ಹಳೆಯದಾದ ಭೌತಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದೆ ಎಂದರು.
ತಾಪಂ ನರೇಗಾ ಸಹಾಯಕ ನಿರ್ದೇಶಕರಾದ ನಿಂಗನಗೌಡ ಹಿರೇಹಾಳ ಮಾತನಾಡಿ, ಯೋಗ ಮನಸ್ಸು, ದೇಹ ಮತ್ತು ಆತ್ಮ ಸೇರಿದ ಎಲ್ಲ ಮೂರು ಅಂಶಗಳನ್ನು ಶುದ್ಧೀಕರಿಸಲು ನೆರವಾಗುತ್ತದೆ. ನಮಗೂ ಮತ್ತು ಪ್ರಕೃತಿ ಮಾತೆಯ ಜೊತೆ ಸಂಪರ್ಕ ಕಲ್ಪಿಸುತ್ತದೆ ಎಂದರು.ಈ ಸಂದರ್ಭದಲ್ಲಿ ತಾಪಂ ಸಿಬ್ಬಂದಿ ಬಸವರಾಜ ಕೆ., ಚಂದ್ರಶೇಖರ ಹಿರೇಮಠ, ಬಸವರಾಜ, ಪಿಡಿಒ ಶರಣಮ್ಮ ಕೆ., ಗ್ರಾಪಂ ಅಧ್ಯಕ್ಷರು, ಸರ್ವ ಸದಸ್ಯರು, ಶಿಕ್ಷಕರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸ್ವಸಹಾಯ ಸಂಘದ ಸದಸ್ಯರು, ಗ್ರಾಮ ಪಂಚಾಯಿತಿ ಸಿಬ್ಬಂದಿ ಇದ್ದರು.