ಸಾರಾಂಶ
ಆರೋಗ್ಯವಂತ ಜೀವನಕ್ಕೆ ಯೋಗ ಅತ್ಯಂತ ಸಹಕಾರಿಯಾಗಿದೆ ಎಂದು ಯೋಗ ಶಿಕ್ಷಕ ಹಾಗೂ ತಾಂತ್ರಿಕ ಸಹಾಯಕ ಇಂಜಿನಿಯರ್ ಉದಯಕುಮಾರ್ ಹೇಳಿದರು.
ಕನ್ನಡಪ್ರಭ ವಾರ್ತೆ ಸೇಡಂ
ಸತತ ಯೋಗಾಭ್ಯಾಸದಿಂದ ಮಾನಸಿಕ, ದೈಹಿಕ ಒತ್ತಡವನ್ನು ಕಡಿಮೆ ಮಾಡುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ ಎಂದು ಖ್ಯಾತ ಯೋಗ ಪಟು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೋಮನಾಥ ರೆಡ್ಡಿ ಪುರ್ಮಾ ಹೇಳಿದರು.ಅವರು ವಿಶ್ವ ಯೋಗ ದಿನಾಚರಣೆ ಅಂಗವಾಗಿ ಸೇಡಂ ತಾಲೂಕು ಕಾನೂನು ಸೇವಾ ಸಮಿತಿ ಮತ್ತು ಸೇಡಂ ನ್ಯಾಯವಾದಿಗಳ ಸಂಘದ ವತಿಯಿಂದ ನ್ಯಾಯಾಧೀಶರು, ನ್ಯಾಯಾಲಯದ ಸಿಬ್ಬಂದಿ ಹಾಗೂ ನ್ಯಾಯವಾದಿಗಳಿಗಾಗಿ ನ್ಯಾಯಾಲಯದ ಆವರಣದಲ್ಲಿ ಆಯೋಜಿಸಿದ್ದ ಯೋಗಾಭ್ಯಾಸ ಕಾರ್ಯಕ್ರಮದಲ್ಲಿ ಯೋಗಾಭ್ಯಾಸ ಮಾಡಿಸಿದರು.
ಸೇಡಂ ನಲ್ಲಿ ಪೀಠಾಸೀನ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕರಣ್ ಗುಜ್ಜರ್, ಹಿರಿಯ ಸಿವಿಲ್ ನ್ಯಾಯಾಧೀಶ ಸಾಗರ್ ಗುರುಗೌಡ ಪಾಟೀಲ, ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶೆ ಲಲಿತಾ ಕೆ, ಸೇಡಂ ವಕೀಲರ ಸಂಘದ ಅಧ್ಯಕ್ಷ ಮಲ್ಲನಗೌಡ ಬೆನಕನಹಳ್ಳಿ, ಕಾರ್ಯದರ್ಶಿ ವಸಂತಕುಮಾರ್ ಪೂಜಾರಿ, ಉಪಾಧ್ಯಕ್ಷ ಮಹೇಂದ್ರ ರೆಡ್ಡಿ ಜಿಲ್ಲೇಡಪಲ್ಲಿ ಸೇರಿದಂತೆ ಇನ್ನಿತರ ವಕೀಲರು, ನ್ಯಾಯಾಲಯದ ಸಿಬ್ಬಂದಿ ಪಾಲ್ಗೊಂಡಿದ್ದರು.