ಯೋಗವು ಪ್ರತಿಯೊಬ್ಬರ ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಸಹಾಯಕಾರಿಯಾಗಿದೆ

ಕಾರಟಗಿ: ಪಟ್ಟಣದ ಶಾಂತಿನಿಕೇತನ ಪಬ್ಲಿಕ್ ಶಾಲೆಯಲ್ಲಿ 12ನೇ ಅಂತಾರಾಷ್ಟ್ರೀಯ ಯೋಗ ದಿನ ಭಾನುವಾರ ಆಚರಿಸಲಾಯಿತು.

ಸಸಿಗೆ ನೀರೆರೆಯುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಸಂಸ್ಥೆಯ ಕಾರ್ಯದರ್ಶಿ ಶರಣಯ್ಯ ಸ್ವಾಮಿ, ಯೋಗವು ಪ್ರತಿಯೊಬ್ಬರ ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಸಹಾಯಕಾರಿಯಾಗಿದೆ, ಅಲ್ಲದೆ ನಿಮ್ಮ ಓದಿನ ಜ್ಞಾಪಕ ಶಕ್ತಿ ವೃದ್ಧಿಸಲು ಯೋಗವು ಮುಖ್ಯವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಶರಣಪ್ಪ ಅಂಗಡಿ, ಯೋಗ ಜಗತ್ತಿಗೆ ಕೊಡುಗೆಯಾಗಿ ನೀಡಿದ ಹೆಮ್ಮೆ ಭಾರತಕ್ಕೆ ಸಲ್ಲುತ್ತದೆ, ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಂತ ಅಸಹಜ ಸಾವು ಕಾಣುತ್ತೇವೆ. ಇದಕ್ಕೆ ಯೋಗ ಪರಿಹಾರವಾಗಿದೆ ಎಂದು ಹೇಳಿದರು.

ಯೋಗ ಶಿಕ್ಷಕಿ ಪೂರ್ಣಿಮಾ ಮಾರ್ಗದರ್ಶನದಲ್ಲಿ ವಿವಿಧ ಯೋಗಾಸನಗಳನ್ನು ಮಕ್ಕಳಿಗೆ ಹಾಗೂ ಶಾಲಾ ಸಿಬ್ಬಂದಿಗಳಿಗೆ ಮಾಡಿಸಲಾಯಿತು.

ಶಿಕ್ಷಕಿಯರಾದ ಕುಮಾರಿ ಶರಣಮ್ಮ, ಭಾರತಿ ಮತ್ತು ಅನಿತಾ ನಿರ್ವಹಿಸಿದರು.