ಮನಸ್ಸಿನ ಏಕಾಗ್ರತೆ ಹೆಚ್ಚಿಸಲು ಯೋಗ ನೆರವು: ಡೀಸಿ ಡಾ.ಅವಿನಾಶ್ ರಾಜೇಂದ್ರನ್

| Published : Jun 23 2024, 02:08 AM IST

ಮನಸ್ಸಿನ ಏಕಾಗ್ರತೆ ಹೆಚ್ಚಿಸಲು ಯೋಗ ನೆರವು: ಡೀಸಿ ಡಾ.ಅವಿನಾಶ್ ರಾಜೇಂದ್ರನ್
Share this Article
  • FB
  • TW
  • Linkdin
  • Email

ಸಾರಾಂಶ

ಯೋಗಭ್ಯಾಸ ನಮ್ಮಲ್ಲಿ ದೈಹಿಕವಾಗಿ ಶಕ್ತಿಯನ್ನು ತುಂಬುವುದರ ಜೊತೆಗೆ ನಕಾರಾತ್ಮಕ ಮನಸ್ಥಿತಿಯಿಂದ ಸೃಜನಶೀಲತೆಯ ಹಾದಿಯನ್ನು ತೋರುತ್ತದೆ. ಅದರಿಂದ ನಾವು ಆರೋಗ್ಯಕರ ಮನಸ್ಸು ಮತ್ತು ಸದೃಢ ದೇಹವನ್ನು ಪಡೆಯಬಹುದು. ಯೋಗದ ಹಲವು ಉಪಯುಕ್ತತೆಯ ಬಗ್ಗೆ ಎಲ್ಲರಿಗೂ ಅರಿವು ಮೂಡಿಸಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿ ವರ್ಷ ಯೋಗ ದಿನವನ್ನು ಆಚರಿಸಲಾಗುತ್ತದೆ.

ಕನ್ನಡಪ್ರಭ ವಾರ್ತೆ ರಾಮನಗರ

ಪ್ರತಿದಿನವೂ ಯೋಗಾಭ್ಯಾಸವನ್ನು ಮಾಡಿದಾಗ ನಮ್ಮ ದೈನಂದಿನ ಜೀವನ ಉತ್ಸುಕತೆಯಿಂದ ಕೂಡಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅಭಿಪ್ರಾಯಪಟ್ಟರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಕಚೇರಿ ವತಿಯಿಂದ ಆಯೋಜಿಸಲಾಗಿದ್ದ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸಾಮೂಹಿಕ ಯೋಗ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಯೋಗಭ್ಯಾಸ ನಮ್ಮಲ್ಲಿ ದೈಹಿಕವಾಗಿ ಶಕ್ತಿಯನ್ನು ತುಂಬುವುದರ ಜೊತೆಗೆ ನಕಾರಾತ್ಮಕ ಮನಸ್ಥಿತಿಯಿಂದ ಸೃಜನಶೀಲತೆಯ ಹಾದಿಯನ್ನು ತೋರುತ್ತದೆ. ಅದರಿಂದ ನಾವು ಆರೋಗ್ಯಕರ ಮನಸ್ಸು ಮತ್ತು ಸದೃಢ ದೇಹವನ್ನು ಪಡೆಯಬಹುದು. ಯೋಗದ ಹಲವು ಉಪಯುಕ್ತತೆಯ ಬಗ್ಗೆ ಎಲ್ಲರಿಗೂ ಅರಿವು ಮೂಡಿಸಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿ ವರ್ಷ ಯೋಗ ದಿನವನ್ನು ಆಚರಿಸಲಾಗುತ್ತದೆ ಎಂದರು.

ದೈಹಿಕ ಆರೋಗ್ಯವನ್ನು ಮೀರಿ, ಯೋಗವು ಮಾನಸಿಕ ಯೋಗಕ್ಷೇಮಕ್ಕೆ ಗಮನಾರ್ಹವಾಗಿ ಕೊಡುಗೆ ನೀಡುತ್ತದೆ. ಮಾನಸಿಕ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ನೆರವು ನೀಡುವುದರೊಂದಿಗೆ ಮನಸ್ಸಿನ ಏಕಾಗ್ರತೆಯನ್ನು ಹೆಚ್ಚಿಸುತ್ತದೆ ಮತ್ತು ಮಾನಸಿಕ ಸ್ಪಷ್ಟತೆಯನ್ನು ಉತ್ತೇಜಿಸುತ್ತದೆ ಎಂದು ಹೇಳಿದರು.

ಜಿಲ್ಲಾ ಆಯುಷ್ ಅಧಿಕಾರಿ ಡಾ. ಪದ್ಮಜಾ ಮಾತನಾಡಿದರು. ಪಂತಜಲಿ ಯೋಗ ಶಿಕ್ಷಣದ ಅಧ್ಯಕ್ಷ ಸತೀಶ್ ನೇತೃತ್ವದಲ್ಲಿ ಯೋಗ ಅಭ್ಯಾಸ ಮಾರ್ಗದರ್ಶನ ನೀಡಿದರು. ಇದೇ ಸಂಧರ್ಭದಲ್ಲಿ ಆರೋಗ್ಯದ ಕೈಪಿಡಿಯನ್ನು ಬಿಡುಗಡೆ ಮಾಡಲಾಯಿತು.

ಜಿಪಂ ಸಿಇಒ ದಿಗ್ವಿಜಯ್ ಬೋಡ್ಕೆ, ಉಪ ಪೊಲೀಸ್ ವರಿಷ್ಠಾಧಿಕಾರಿ ಸುರೇಶ್, ಡಿವೈಎಸ್ಪಿ ದಿನಕರ್ ಶೆಟ್ಟಿ. ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಸವರಾಜು, ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಶಾಲಾ ಮತ್ತು ಕಾಲೇಜಿನ ವಿದ್ಯಾರ್ಥಿಗಳು, ಆರೋಗ್ಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.