ಸಾರಾಂಶ
ಬಹುತೇಕ ರೈತರ ಮಕ್ಕಳು ಐಎಎಸ್, ಐಪಿಎಸ್, ಐಎಫ್‌ಎಸ್. ಕೆಎಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆಯಾಗಿ ರಾಷ್ಟ ಮತ್ತು ಅಂತರಾಷ್ಟ್ರ ಮಟ್ಟದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಬಡ ವಿದ್ಯಾರ್ಥಿನಿಯರಿಗಾಗಿ ಹಾಸ್ಟೆಲ್ ನಿರ್ಮಿಸಲು ೧೦ ಕೋಟಿ ಮೀಸಲಿಟ್ಟಿದ್ದು ಬೈರೇಗೌಡ ನಗರದಲ್ಲಿ ನಿರ್ಮಾಣ ಮಾಡಲಾಗುವುದು.
ಕನ್ನಡಪ್ರಭ ವಾರ್ತೆ ಕೋಲಾರಪತಂಜಲಿ ಯೋಗ ಶಿಕ್ಷಣ ಸಮಿತಿಯ ಸಂಸ್ಕಾರ, ಸಂಘಟನೆ, ಸೇವೆ ಎಂಬ ಮೂರು ಅಂಶಗಳನ್ನು ಕಳೆದ ೩೫ ವರ್ಷದಿಂದ ಅನುಸರಿಸುತ್ತಾ ಬರುತ್ತಿದೆ, ಕಳೆದ ೨೦೦೪ರಲ್ಲಿ ಈ ಸಮಿತಿಗೆ ಸೇರ್ಪಡೆಯಾದೆ. ಯೋಗಿಯಾದವನಿಗೆ ಯೋಗ ಲಭಿಸುತ್ತದೆ ನಾವುಗಳೆಲ್ಲ ಯೋಗಿಯಾಗಿ ನಡೆದುಕೊಳ್ಳಬೇಕೆಂದು ಎಂಎಲ್ಸಿ ಇಂಚರ ಗೋವಿಂದರಾಜು ಹೇಳಿದರು.ನಗರದ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಟಿ.ಚೆನ್ನಯ್ಯ ರಂಗ ಮಂದಿರದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯೋಗ ತಪ್ಪಸ್ಸಿನಿಂದ ಕೈವಾರ ಯೋಗಿ ನಾರೇಯಣರಾದವರು ಪ್ರಾಣಾಯಾಮ ನಿರಂತರವಾಗಿ ಆಭ್ಯಾಸವಾಗಿ ಅಳವಡಿಸಿಕೊಂಡಿದ್ದರು, ಯೋಗದಿಂದ ಉತ್ತಮ ಅಂಶಗಳನ್ನು ಅಳವಡಿಸಿಕೊಂಡಲ್ಲಿ ಜೀವನದಲ್ಲಿ ಬದಲಾವಣೆಗೆ ಪೂರಕವಾಗಲಿದೆ ಎಂದರು. ವಿದ್ಯಾರ್ಥಿನಿಯರ ಹಾಸ್ಟೆಲ್
ಬಹುತೇಕ ರೈತರ ಮಕ್ಕಳು ಐಎಎಸ್, ಐಪಿಎಸ್, ಐಎಫ್‌ಎಸ್. ಕೆಎಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆಯಾಗಿ ರಾಷ್ಟ ಮತ್ತು ಅಂತರಾಷ್ಟ್ರ ಮಟ್ಟದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಬಡ ವಿದ್ಯಾರ್ಥಿನಿಯರಿಗಾಗಿ ಹಾಸ್ಟೆಲ್ ನಿರ್ಮಿಸಲು ೧೦ ಕೋಟಿ ಮೀಸಲಿಟ್ಟಿದ್ದು ಬೈರೇಗೌಡ ನಗರದಲ್ಲಿ ನಿರ್ಮಾಣ ಮಾಡಲಾಗುವುದು. ಪ್ರತಿವರ್ಷ ಸುಮಾರು ೨೫ ಲಕ್ಷ ರೂ ಸಂಗ್ರಹಿಸಿ ಕನಿಷ್ಟ ೨೦೦ ಮಂದಿ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುತ್ತಿರುವುದಾಗಿ ತಿಳಿಸಿದರು.ವಿದ್ಯಾರ್ಥಿಗಳಿಗೆ ಪುರಸ್ಕಾರ
ಇದೇ ಸಂದರ್ಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಸಮಿತಿಯ ಗೌರವಾಧ್ಯಕ್ಷ ನಂಜುಂಡಯ್ಯ ಶ್ರೇಷ್ಟಿ, ಬೆಂಗಳೂರಿನ ಶ್ರೀ ರಾಘವೇಂದ್ರ ಮಠದ ಪರಮಾನಂದ ಗುರೂಜಿ, ಸಮಿತಿಯ ಗೌರವಾಧ್ಯಕ್ಷ ಬಿಸಪ್ಪಗೌಡ, ಕೋಮುಲ್ ನಿರ್ದೇಶಕ ಕಾಡೇನಹಳ್ಳಿ ನಾಗರಾಜ್ ಇದ್ದರು. ಸಮಿತಿಯ ಕಾರ್ಯದರ್ಶಿ ವೇಣುಗೋಪಾಲ ಸ್ವಾಗತಿಸಿ, ಡಾ.ಜನಾರ್ದನ್ ನಿರೂಪಿಸಿದರು.