ದೈಹಿಕ, ಮಾನಸಿಕ ಆರೋಗ್ಯಕ್ಕೆ ಯೋಗಾಭ್ಯಾಸ ಅಗತ್ಯ: ನಟರಾಜ್

| Published : Jun 30 2024, 12:46 AM IST

ದೈಹಿಕ, ಮಾನಸಿಕ ಆರೋಗ್ಯಕ್ಕೆ ಯೋಗಾಭ್ಯಾಸ ಅಗತ್ಯ: ನಟರಾಜ್
Share this Article
  • FB
  • TW
  • Linkdin
  • Email

ಸಾರಾಂಶ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ, ದೇವಿಕಾ ಯೋಗ ಕ್ಲಾಸ್ ನಿರ್ದೇಶಕಿ ದೇವಿಕಾ ಪುರುಷೋತ್ತಮ್ ನೇತೃತ್ವದಲ್ಲಿ ನಡೆದ ಪತ್ರಕರ್ತರ ಯೋಗ ತರಬೇತಿ ಶಿಬಿರ ಸಂಪನ್ನಗೊಂಡಿತು.

ಕನ್ನಡಪ್ರಭ ವಾರ್ತೆ ಮಂಗಳೂರು

ದೈಹಿಕ, ಮಾನಸಿಕ ಆರೋಗ್ಯಕ್ಕೆ ಯೋಗಾಭ್ಯಾಸ ಅಗತ್ಯವಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಲೋಕಾಯುಕ್ತ ಎಸ್.ಪಿ ನಟರಾಜ್ ಹೇಳಿದ್ದಾರೆ.ನಗರದ ಪತ್ರಿಕಾ ಭವನದಲ್ಲಿ ಶನಿವಾರ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ, ದೇವಿಕಾ ಯೋಗ ಕ್ಲಾಸ್ ನಿರ್ದೇಶಕಿ ದೇವಿಕಾ ಪುರುಷೋತ್ತಮ್ ನೇತೃತ್ವದಲ್ಲಿ ನಡೆದ ಪತ್ರಕರ್ತರ ಯೋಗ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ಯೋಗಾಭ್ಯಾಸ ಎಂದರೆ ಕೇವಲ ದೈಹಿಕ ಅಂಗಾಂಗಗಳನ್ನು ಬಳಸಿ ಆಸನಗಳನ್ನು ಮಾಡುವುದು ಮಾತ್ರ ಅಲ್ಲ. ಯೋಗವು ನಮ್ಮ ಮನಸ್ಸು ಹಾಗೂ ನಮ್ಮ ಚಟುವಟಿಕೆಗಳನ್ನು ಹೆಚ್ಚು ಉತ್ಸಾಹದಿಂದ ಮಾಡಲು ಸಹಕಾರಿ ಎಂದರು.ದೇವಿಕಾ ಯೋಗ ತರಬೇತಿ ಕೇಂದ್ರದ ಶಿಕ್ಷಕಿ ದೇವಿಕಾ ಪುರುಷೋತ್ತಮ ಮಾತನಾಡಿ, ಯೋಗ ತರಬೇತಿ ನೀಡುವವರು ವ್ಯಕ್ತಿಯ ಮಾನಸಿಕ, ದೈಹಿಕ ಸ್ಥಿತಿಯನ್ನು ಅರಿತುಕೊಂಡು ಆತನಿಗೆ ಪೂರಕವಾದ ಯೋಗ ತರಬೇತಿ ನೀಡಿದಾಗ ಆತನ ದೇಹದ ಅಂಗಾಂಗಗಳಲ್ಲಿ ಶಕ್ತಿ ತುಂಬಲು ಸಾಧ್ಯ ಮತ್ತು ಮಾನಸಿಕ ಆರೋಗ್ಯ ವರ್ಧನೆಗೆ ಸಹಾಯವಾಗುತ್ತದೆ ಎಂದರು.

ಐಎಂಎ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಕಾರ್ಯದರ್ಶಿ ಡಾ.ಅವಿನ್ ಆಳ್ವ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ಉಪಾಧ್ಯಕ್ಷ ಆರಿಫ್ ಪಡುಬಿದ್ರಿ, ಪ್ರೆಸ್ ಕ್ಲಬ್ ಕಾರ್ಯಕಾರಿ ಸಮಿತಿ ಸದಸ್ಯ ದಯಾ ಕುಕ್ಕಾಜೆ, ಪತ್ರಕರ್ತ ಗಿರಿಧರ ಶೆಟ್ಟಿ ಇದ್ದರು. ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ನಿರೂಪಿಸಿದರು.