ಸಾರಾಂಶ
ಕಾಂಗ್ರೆಸ್ ಮುಖಂಡ ಡಾ.ಬಿ.ಯೋಗೇಶ ಬಾಬು ಅವರಿಗೆ ಕಾಂಗ್ರೆಸ್ ಸರ್ಕಾರ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಮೊಳಕಾಲ್ಮುರು: ಕಾಂಗ್ರೆಸ್ ಮುಖಂಡ ಡಾ.ಬಿ.ಯೋಗೇಶ ಬಾಬು ಅವರಿಗೆ ಕಾಂಗ್ರೆಸ್ ಸರ್ಕಾರ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಇಲ್ಲಿನ ಬಸ್ ನಿಲ್ದಾಣದ ಆವರಣದಲ್ಲಿ ಗುರುವಾರ ನೆಚ್ಚಿನ ನಾಯಕನಿಗೆ ನಿಗಮ ಮಂಡಳಿಯಲ್ಲಿ ಸ್ಥಾನ ನೀಡಿರುವುದರಿಂದ ಸಂತಸ ವ್ಯಕ್ತ ಪಡಿಸಿರುವ ಕಾಂಗ್ರೆಸ್ ಕಾರ್ಯಕರ್ತರು ಸರ್ಕಾರದ ಪರವಾಗಿ ಜೈ ಘೋಷಗಳನ್ನು ಕೂಗಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪರ ಘೋಷಣೆ ಕೂಗಿದರು. ಬಸ್ ನಿಲ್ದಾಣ, ಪಟ್ಟಣ ಪಂಚಾಯಿತಿ ಸರ್ಕಲ್ ಆವರಣದಲ್ಲಿ ಪಠಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.ಹುಟ್ಟೂರು ಬಿಜಿಕೆರೆಯಲ್ಲಿ ಸಂಭ್ರಮ: ಡಾ.ಬಿ.ಯೋಗೇಶ ಬಾಬು ಅವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಸಿಕ್ಕಿರುವುದರಿಂದ ಹುಟ್ಟೂರು ತಾಲೂಕಿನ ಬಿಜಿಕೆರೆ ಗ್ರಾಮದಲ್ಲಿ ಭಾರಿ ಸಂಭ್ರಮ ವ್ಯಕ್ತವಾಗಿದೆ. ಕುಟುಂಬಸ್ಥರು ಮನೆ ದೇವರಿಗೆ ತೆರಳಿ ಪೂಜೆ ಸಲ್ಲಿಸಿದರು.
ಗ್ರಾಪಂ ಅಧ್ಯಕ್ಷ ಎಸ್.ಜಯಣ್ಣ ಮಾತನಾಡಿ, ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ ಕಳೆದೆರಡು ದಶಕದಲ್ಲಿ ತಾಲೂಕು ಮತ್ತು ಲೋಕಸಭಾ ಅಧ್ಯಕ್ಷರಾಗಿ ಪಕ್ಷದಲ್ಲಿ ಸೇವೆ ಸಲ್ಲಿಸಿರುವ ಡಾ.ಬಿ.ಯೋಗೇಶ ಬಾಬು ಜಿಲ್ಲಾ ಪಂಚಾಯಿತಿ ಸದಸ್ಯರಾಗಿ, ಈ ಭಾಗದ ಎಲ್ಲಾ ವರ್ಗದರೊಂದಿಗೆ ಸ್ನೇಹಗಳಿಸಿ ಪಕ್ಷವನ್ನು ಸಂಘಟಿಸುವಲ್ಲಿ ಶ್ರಮಿಸಿದ್ದಾರೆ ಎಂದರು.ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಎನ್.ಜಗದೀಶ, ಪಿ.ಆರ್.ಕಾಂತರಾಜ್, ಅರುಣ, ಕಿರಣ್ ವಾಂಜ್ರೆ, ಶ್ರೀನಿವಾಸಲು, ಶಿವಲಿಂಗಪ್ಪ, ಬೀಮಣ್ಣ, ರಾಮು, ಶರತ್, ಮಂಜಣ್ಣ ಇದ್ದರು.