ಸಾರಾಂಶ
ಚನ್ನಪಟ್ಟಣ: ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಶಾಸಕ ಸಿ.ಪಿ.ಯೋಗೇಶ್ವರ್ ಹಾಗೂ ಜೆಡಿಎಸ್ ತಾಲೂಕು ಅಧ್ಯಕ್ಷ ಎಚ್.ಸಿ.ಜಯಮುತ್ತು ಪ್ರತ್ಯೇಕವಾಗಿ ಉಚಿತ ಗಣೇಶ ಮೂರ್ತಿಗಳನ್ನು ವಿತರಿಸಿದರು.
ಶಾಸಕ ಸಿ.ಪಿ.ಯೋಗೇಶ್ವರ್ ೭೦೦ಕ್ಕೂ ಹೆಚ್ಚು ಹಾಗೂ ಎಚ್.ಸಿ.ಜಯಮುತ್ತು ೫೦೦ಕ್ಕೂ ಹೆಚ್ಚು ಗಣೇಶ ಮೂರ್ತಿಗಳನ್ನು ಉಚಿತವಾಗಿ ವಿತರಿಸಿದರು.ಶಾಸಕ ಸಿ.ಪಿ.ಯೋಗೇಶ್ವರ್ ಬೆಂಬಲಿಗರು ನಗರದ ೫ನೇ ಅಡ್ಡರಸ್ತೆಯಲ್ಲಿರುವ ಶಾಸಕರ ಗೃಹಕಚೇರಿ, ಮಳೂರು, ಬೇವೂರು, ಹೊಂಗನೂರು, ಕೋಡಂಬಳ್ಳಿ, ಅಕ್ಕೂರು ಜಿಪಂ ವ್ಯಾಪ್ತಿಯಲ್ಲಿ ಗಣೇಶಮೂರ್ತಿಗಳನ್ನು ವಿತರಿಸಿದರು.
ತಾಲೂಕಿನ ಡೊಡ್ಡಮಳೂರು ಗ್ರಾಮದಲ್ಲಿನ ಸಾಯಿಮಂದಿರದಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಎಚ್.ಸಿ.ಜಯಮುತ್ತು ಉಚಿತ ಗಣೇಶ ಮೂರ್ತಿಗಳನ್ನು ವಿತರಿಸಿದರು.ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿವರ್ಷದಂತೆ ಈ ಬಾರಿಯೂ ಉಚಿತವಾಗಿ ಸುಮಾರು ೫೦೦ಕ್ಕೂ ಹೆಚ್ಚು ಗಣೇಶಮೂರ್ತಿಗಳನ್ನು ವಿತರಿಸಲಾಗಿದೆ. ಕಳೆದ ೧೬ ವರ್ಷಗಳಿಂದ ಚನ್ನಮ್ಮ ಚಾರಿಟಬಲ್ ಟ್ರಸ್ಟ್‌ನಿಂದ ತಾಲೂಕಿನಲ್ಲಿ ಗಣೇಶಮೂರ್ತಿಗಳನ್ನು ವಿತರಿಸಿಕೊಂಡು ಬರುತ್ತಿದ್ದು, ಅದರಂತೆ ಈ ಬಾರಿಯೂ ವಿತರಿಸಲಾಗಿದೆ ಎಂದು ತಿಳಿಸಿದರು.
ಗಣೇಶ ಮೂರ್ತಿಗಳ ವಿತರಣೆ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ. ಪಕ್ಷಾತೀತವಾಗಿ ನೋಂದಣಿ ಮಾಡಿಸಿದರಿಗೆಲ್ಲರಿಗೂ ವಿತರಿಸಲಾಗಿದೆ. ತಾಲೂಕಿನ ವಿವಿಧ ಗ್ರಾಮಗಳಿಗೆ ಗಣೇಶ ಮೂರ್ತಿಗಳನ್ನು ವಿತರಿಸಲಾಗಿದೆ. ಶಕ್ತಿ ಇರುವವರೆಗೆ ಗಣೇಶ ಮೂರ್ತಿಗಳನ್ನು ವಿತರಿಸಲಾಗುವುದು. ರಾಜಕೀಯ ಹೊರತುಪಡಿಸಿ ಪಕ್ಷಾತೀತವಾಗಿ ಗಣೇಶ ಮೂರ್ತಿ ವಿತರಣೆ ಮಾಡಲಾಗುವುದು ಎಂದರು.ಈ ವೇಳೆ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಕುಕ್ಕೂರುದೊಡ್ಡಿ ಜಯರಾಮು, ಡಿಎಂಕೆ ಕುಮಾರ್ ಇತರರಿದ್ದರು.
ಪೊಟೋ೨೬ಸಿಪಿಟಿ೧:ಚನ್ನಪಟ್ಟಣ ತಾಲೂಕಿನ ಹೊಂಗನೂರು ಜಿಪಂ ವ್ಯಾಪ್ತಿಯಲ್ಲಿ ಶಾಸಕ ಸಿ.ಪಿ.ಯೋಗೇಶ್ವರ್ ಬೆಂಬಲಿಗರು ಶಾಸಕರ ಗೃಹಕಚೇರಿ, ಮಳೂರು, ಬೇವೂರು, ಹೊಂಗನೂರು, ಕೋಡಂಬಳ್ಳಿ, ಅಕ್ಕೂರು ಜಿಪಂ ವ್ಯಾಪ್ತಿಯಲ್ಲಿ ಗಣೇಶಮೂರ್ತಿಗಳನ್ನು ವಿತರಿಸಿದರು.
೨೬ಸಿಪಿಟಿ೨:ಚನ್ನಪಟ್ಟಣ ತಾಲೂಕಿನ ದೊಡ್ಡಮಳೂರು ಗ್ರಾಮದ ಸಾಯಿ ಮಂದಿರದಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಎಚ್.ಸಿ.ಜಯಮುತ್ತು ಗಣೇಶ ಮೂರ್ತಿ ವಿತರಿಸಿದರು. ಜೆಡಿಎಸ್ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.